ಕಲಬುರಗಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಫೆ.28ರಿಂದ ಮಾರ್ಚ್ 17ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಅವರು ಮಾತನಾಡಿದರು.

‘ಪ್ರಸಕ್ತ ಸಾಲಿನಲ್ಲಿ 30,514 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 24,914 ರೆಗ್ಯೂಲರ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 512 ಖಾಸಗಿ, 5,064 ಪುನರಾವರ್ತಿತ, ಫಲಿತಾಂಶ ಸುಧಾರಣೆಗಾಗಿ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ನಗರದಲ್ಲಿ 25 ಮತ್ತು ತಾಲ್ಲೂಕು ಪ್ರಾಂತ್ಯದಲ್ಲಿ 26 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದರು.

‘ಮುಖ್ಯ ಅಧೀಕ್ಷಕರು ಸೂಸುತ್ರ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕೇಂದ್ರದ ಹೊರಗೆ ವಿಶೇಷ ಬಂದೋಬಸ್ತ್ಗಾಗಿ ಹತ್ತಿರದ ಠಾಣೆಯಿಂದ ಪೊಲೀಸರ ನೆರವು ಪಡೆದುಕೊಳ್ಳಬೇಕು’ ಎಂದರು.

‘ಪರೀಕ್ಷೆ ನಡೆಯುವ ದಿನಗಳಂದು ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳು ಸ್ಥಗಿತಗೊಂಡಲ್ಲಿ ಕಾನೂನು ಮತ್ತು ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅದಕ್ಕೆ ಆಸ್ಪದ ಕೊಡಬಾರದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೂರ್ವಭಾವಿ ಭೇಟಿ ನೀಡಿ, ಸಿಸಿಟಿವಿ ವ್ಯವಸ್ಥೆ ಹಾಗೂ ಮೂಲ ಸೌಲಭ್ಯಗಳಿರುವುದನ್ನು ಖಚಿತಪಡಿಸಲಾಗಿದೆ. ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಕೂಡ ಕಲ್ಪಿಸಲಾಗುತ್ತದೆ’ ಎಂದು ಹೇಳಿದರು.

ಡಿಸಿಪಿ ಪ್ರವೀಣ ನಾಯಕ್, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣವರ, ಡಿಡಿಪಿಯು ಸುರೇಶ ಅಕ್ಕಣ್ಣ ಸೇರಿದಂತೆ ಪ್ರಾಂಶುಪಾಲರು, ಕಂದಾಯ ಇಲಾಖೆಯ ಅಧಿಕಾರಿಗಳು, ಜಿಲ್ಲಾಮಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.