ಕಲಬುರಗಿ: ಕೆಕೆಆರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೇಡಂ ತಾಲ್ಲೂಕಿನ ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಬೈಕ್ ಸವಾರನನ್ನು ಸೇಡಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಕಲಬುರಗಿಯಿಂದ ಗುರುಮಠಕಲ್ ಕಡೆಗೆ ಹೋಗುತ್ತಿದ್ದ ಬಸ್ ಎದುರಿಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ತಕ್ಷಣವೇ ಬಸ್ ರಸ್ತೆಯ ಪಕ್ಕದಲ್ಲಿ ಇಳಿದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಘಟನೆ ಮಳಖೇಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.