ಸೇಡಂ: ತಾಲ್ಲೂಕಿನ ಜಾಕನಪಲ್ಲಿ ಗ್ರಾಮಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೋಮವಾರ ಭೇಟಿ ನೀಡಿ ಈಚೆಗೆ ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು.

ಜಾಕನಪಲ್ಲಿ ಗ್ರಾಮದ ರೈತ ಆಶಪ್ಪ ತಂದೆ ನರಸಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ₹ 5 ಲಕ್ಷ ಪರಿಹಾರದ ಪತ್ರ ವಿತರಿಸಿದರು. ನಂತರ ಚಂದ್ರಪ್ಪ ಎಂಬುವವರಿಗೆ ಸೇರಿದ ಎತ್ತು ಸಿಡಿಲಿಗೆ ಮೃತಪಟ್ಟಿದ್ದರಿಂದ ಅವರಿಗೆ ₹ 32 ಸಾವಿರ ಪರಿಹಾರದ ಚೆಕ್ ನೀಡಿದರು.

ಅಲ್ಲದೆ ತಾಲ್ಲೂಕಿನ ಕೋನಾಪುರ ಗ್ರಾಮದ ಸಿಡಿಲು ಬಡಿದು ಮೃತಪಟ್ಟ ರೈತ ನರಸಪ್ಪ ಪೂಜಾರಿ (40) ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಪಿಲ್ಲಿಗುಂಟಾ ತಾಂಡಾದಲ್ಲಿ ಸಿಡಿಲಿಗೆ ಬಲಿಯಾದ 25 ಮೇಕೆಗಳು ಮೃತಪಟ್ಟಿದ್ದು, ಅವುಗಳ ಮಾಲೀಕರಿಗೆ ಸಾಂತ್ವನ ಹೇಳಿದರು. ನಂತರ ಮುಧೋಳ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿದರು.

ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ಉಪ ತಹಶೀಲ್ದಾರ್ ಶರಣಗೌಡ ಪಾಟೀಲ ಕೋಡ್ಲಾ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾಮ, ಮಲ್ಲಿಕಾರ್ಜುನರೆಡ್ಡಿ ಇನ್ನಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-31-1293585279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.