ಟೀಕೆ ‘ಎಐಸಿಸಿ ಅಧ್ಯಕ್ಷರಾದಾಗಿನಿಂದ ಮಲ್ಲಿಕಾರ್ಜುನ ಖರ್ಗೆ ಅವರು ಬಂಜಾರ ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ಮೇಲೆ ನನ್ನ ನೇರ ಆರೋಪವಾಗಿದೆ’ ಎಂದು ಮಾಜಿ ಸಚಿವ ಬಾಬುರಾವ್ ಚವ್ಹಾಣ ಟೀಕಿಸಿದರು. ‘ತೆಲಂಗಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ನಮ್ಮ ಸಮುದಾಯವರನ್ನು ಸಚಿವರನ್ನಾಗಿ ಮಾಡಲಿಲ್ಲ. ಖರ್ಗೆ ಆದೇಶದಂತೆಯೇ ಹೀಗೆಲ್ಲ ನಿರ್ಲಕ್ಷಿಸಲಾಗುತ್ತಿದೆ’ ಎಂದು ಆರೋಪಿಸಿದರು.