ಕಲಬುರಗಿ: ಬೇಸಿಗೆಯಿಂದ ಪ್ರಯಾಣಿಕರನ್ನು ರಕ್ಷಿಸಲು ಮಹಾನಗರ ಪಾಲಿಕೆಯು ಅಳವಡಿಸಿದ್ದ ನೆರಳು ನೀಡುವ ಹಸಿರು ಹೊದಿಕೆಯು ಇತ್ತೀಚೆಗೆ ಬೀಸಿದ ಬಿರುಗಾಳಿಯಿಂದಾಗಿ ಕಿತ್ತು ಹೋಗಿದೆ.

ಮಹಾನಗರ ಪಾಲಿಕೆಯು ಕಳೆದ ವರ್ಷದ ಬೇಸಿಗೆ ಸಂದರ್ಭದಲ್ಲಿ ಇದನ್ನು ಅಳವಡಿಸಿತ್ತು. ಆಗಾಗ್ಗೆ ಬೀಸಿದ ಗಾಳಿ, ಮಳೆಯಿಂದಾಗಿ ಅಲ್ಲಲ್ಲಿ ಹರಿದು ಹೋಗಿದ್ದು, ಅದನ್ನು ಬದಲಿಸಿ ಹೊಸದಾಗಿ ಅಳವಡಿಸಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದ್ದು, ನೆತ್ತಿ ಸುಡುವ ಬಿಸಿಲಿನಲ್ಲಿಯೇ ಪ್ರಯಾಣಿಕರು ಸಂಚರಿಸಬೇಕಿದೆ. ಸಿಗ್ನಲ್ಗಳಲ್ಲಿ ಹೆಚ್ಚು ಹೊತ್ತು ನಿಲ್ಲುವುದರಿಂದ ಸೂರ್ಯನ ಶಾಖಕ್ಕೆ ಬಳಲಿಕೆ ಬಂದಂತಾಗುತ್ತದೆ. ಇದನ್ನು ತಪ್ಪಿಸಲೆಂದು ಕಳೆದ ವರ್ಷವೇ ನಗರದ ಸರ್ದಾರ್ ಪಟೇಲ್ ವೃತ್ತದಲ್ಲಿ ಕಬ್ಬಿಣದ ಸರಳುಗಳನ್ನು ಅಳವಡಿಸಿ ನೆರಳಿನ ಹೊದಿಕೆಯನ್ನು ಹಾಕಲಾಗಿತ್ತು. ಕಳೆದ ವರ್ಷದ ಹಸಿರು ಹೊದಿಕೆಯನ್ನು ಬದಲಿಸದೇ ಇರುವುದರಿಂದ ಎಲ್ಲೆಂದರಲ್ಲಿ ಹರಿದು ಹೋಗಿ ನೇತಾಡುತ್ತಿದೆ. ಹೀಗಾಗಿ, ಕೂಡಲೇ ಇದನ್ನು ಬದಲಿಸಬೇಕು ಎಂದು ಕಲ್ಯಾಣ ನಾಡು ವಿಕಾಸ ವೇದಿಕೆ ಅಧ್ಯಕ್ಷ ಮುತ್ತಣ್ಣ ನಡಗೇರಿ ಒತ್ತಾಯಿಸಿದ್ದಾರೆ.

ನಗರದ ಜಗತ್ ವೃತ್ತ, ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್ ಪಂಪ್ ಬಳಿಯೂ ಇಂತಹ ಹಸಿರು ಹೊದಿಕೆಯನ್ನು ಅಳವಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-34-816045405

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.