ಕಲಬುರಗಿ: ತಾಲ್ಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ಇದೇ 7ರಂದು ರಾತ್ರಿ 7.30ಕ್ಕೆ ಶರಣಬಸವೇಶ್ವರ ಮಹಾರಥೋತ್ಸವ ಜರುಗಲಿದೆ ಎಂದು ಶರಣಬಸವೇಶ್ವರ ದೇವಸ್ಥಾನ ಸಮಿತಿಯ ಷಣ್ಮುಖಪ್ಪ ಸಿಬರಬಂಡಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಮಾರ್ಚ್ 29ರಿಂದ ವೇದಮೂರ್ತಿ ಮಲ್ಲಿಕಾರ್ಜುನ ಶಾಸ್ತ್ರಿ ಶೇಳಗಿಮಠ ಅವರಿಂದ ಕಲ್ಯಾಣ ನಾಡಿನ ಶರಣರ ಪ್ರವಚನ ನಡೆಯುತ್ತಿದ್ದು, ಏಪ್ರಿಲ್ 6ರವರೆಗೆ ಮುಂದುವರಿಯಲಿದೆ. ಸಂಗೀತ ಸೇವೆಯನ್ನು ಸಿದ್ದಯ್ಯಸ್ವಾಮಿ ಪಡದಳ್ಳಿ, ಮಹಾಂತೇಶ ಟಾಕಳಿ ತಬಲಾ ವಾದನ ಮಾಡುತ್ತಿದ್ದಾರೆ. ಏ.6ರಂದು ಉಚ್ಚಾಯ ಕಾರ್ಯಕ್ರಮ ನಡೆಯಲಿದೆ. ಹಾಗರಗುಂಡಗಿ ವಿರಕ್ತಮಠದ ಶಿವಾನಂದ ಸ್ವಾಮೀಜಿ, ಮುತ್ಯಾನ ಬಬಲಾದನ ಗುರುಪಾದಲಿಂಗ ಶಿವಯೋಗಿಗಳು ನೇತೃತ್ವ ವಹಿಸಲಿದ್ದಾರೆ’ ಎಂದರು.

ಏ.8ರಂದು ಬೆಳಿಗ್ಗೆ 7 ಹಾಗೂ ಸಂಜೆ 5ಕ್ಕೆ ಜಂಗಿ ಪೈಲ್ವಾನರ ಕುಸ್ತಿಗಳು ಜರುಗಲಿವೆ. ಏ.8 ಹಾಗೂ ಏ.10ರಂದು ರಾತ್ರಿ 10ಕ್ಕೆ ಶರಣಪ್ಪ ವಿ. ಹೂಗಾರ ವಿರಚಿತ ‘ಸಿಂಧೂರ’ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ. 10ರಂದು ವಾಲಿವಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಬೇರೆ ಊರಿನಿಂದ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಕಲಬುರಗಿಯ ಸೂಪರ್ ಮಾರ್ಕೆಟ್ ಹಾಗೂ ಕೇಂದ್ರ ಬಸ್ ನಿಲ್ದಾಣದಿಂದ ಬಸ್ಸಿನ ವ್ಯವಸ್ಥೆ ಇರುತ್ತದೆ ಎಂದು ಹೇಳಿದರು.

ದೇವಸ್ಥಾನ ಸಮಿತಿ ಅಧ್ಯಕ್ಷ ಸೋಮಶೇಖರ ಸಜ್ಜನ್, ಸಮಿತಿ ಪದಾಧಿಕಾರಿಗಳಾದ ಬಾಬುರಾವ ವಜಾಪೂರ, ಮಲ್ಲಿಕಾರ್ಜುನ ಖನ್ನಾ, ಭೀಮಾಶಂಕರ ಮರತೂರ, ಶರಣಪ್ಪ ಕುರನಳ್ಳಿ, ಬಸವರಾಜ ರೆಡ್ಡಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-34-798608586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.