ಕಲಬುರಗಿ: ‘ಜಿಲ್ಲಾ ವೀರಶೈವ ಸಮಾಜ ಹಾಗೂ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಏ.16ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಿದ್ಧಗಂಗಾದ ಶಿವಕುಮಾರ ಸ್ವಾಮೀಜಿಗಳ 119ನೇ ಗುರುವಂದನಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಅರುಣಕುಮಾರ್ ಎಸ್. ಪಾಟೀಲ ಕೊಡಲಹಂಗರಗಾ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11.15ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಶಿವಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್. ಅಪ್ಪ ಉದ್ಘಾಟಿಸುವರು. ಜಿಲ್ಲೆಯ ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು’ ಎಂದರು.

‘ಶಾಸಕರಾದ ಎಂ.ವೈ. ಪಾಟೀಲ, ಅಲ್ಲಪ್ರಭು ಪಾಟೀಲ, ವಿಧಾನಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಬಿ.ಜಿ. ಪಾಟೀಲ, ಮಾಜಿ ಶಾಸಕರು ಹಾಗೂ ಇತರ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಇದೇ ವೇಳೆ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿನೋದ ಪಾಟೀಲ ಸರಡಗಿ, ಮಂಜುರೆಡ್ಡಿ, ಜಗನ್ನಾಥ ಪಟ್ಟಣಶೆಟ್ಟಿ, ಚನ್ನಬಸಯ್ಯ ಗುರುವಿನ, ನಾಗರಾಜ, ದೇವೇಂದ್ರಪ್ಪ ಆವಂಟಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-34-810417589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.