ಬೆಂಗಳೂರು: ಕಲಬುರಗಿ ಜಿಲ್ಲೆ ಆಳಂದದಲ್ಲಿ ಶ್ರೀರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಮಾಡಿ, ಕೋಮು ಗಲಭೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆದೇಶ ಮಾಡಿದೆ. ಈ ಆದೇಶಕ್ಕೆ ತಡೆ ನೀಡಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಬಿಜೆಪಿ ನಿಯೋಗದೊಂದಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಪ್ರಕರಣದ ಕುರಿತು ಮನವಿಪತ್ರ ಸಲ್ಲಿಸಿದರು.

ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ‘ವೋಟ್ ಬ್ಯಾಂಕ್ ರಾಜಕಾರಣ ಮತ್ತು ಅಲ್ಪಸಂಖ್ಯಾತರನ್ನು ಓಲೈಸುವ ಒಂದೇ ಉದ್ದೇಶದಿಂದ ಸರ್ಕಾರ ಕಾನೂನನ್ನು ಗಾಳಿಗೆ ತೂರಿದೆ’ ಎಂದು ದೂರಿದರು.

‘ಸಮಾಜಘಾತುಕ ಶಕ್ತಿಗಳ ಬೆನ್ನಿಗೆ ನಿಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ತಾನು ಜನವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಹಿನ್ನೆಲೆಯಲ್ಲಿ, ಸಂವಿಧಾನ ವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದೆವು’ ಎಂದು ಹೇಳಿದರು.

‘ರಾಘವ ಚೈತನ್ಯ ಮಂದಿರದಲ್ಲಿನ ಶಿವಲಿಂಗಕ್ಕೆ ಆರು ನೂರು ವರ್ಷಗಳ ಇತಿಹಾಸವಿದೆ. ಇಲ್ಲಿ ಪದೇ ಪದೇ ಗಲಭೆಗಳು ಆಗಿವೆ. ಜನರು ಪ್ರಾಣ ಕಳೆದುಕೊಂಡಿದ್ದಾರೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಶಿವಲಿಂಗವನ್ನು ಅಪವಿತ್ರಗೊಳಿಸಿದ್ದರು. ಅದನ್ನು ಸ್ವಚ್ಛ ಮಾಡುತ್ತಿದ್ದ ಹಿಂದೂಗಳ ಮೇಲೆ ಸಾವಿರಾರು ಜನ ತಲವಾರು, ಮಚ್ಚಿನಿಂದ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೂ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಪೊಲೀಸ್ ವಾಹನ ಜಖಂ ಮಾಡಿ, ಜಿಲ್ಲಾಧಿಕಾರಿಗಳ ಮೇಲೂ ದಾಳಿ ನಡೆಸಿದ್ದರು. ಇದೊಂದು ದೊಡ್ಡ ಘಟನೆ. ಆದರೆ, ರಾಜ್ಯ ಸರ್ಕಾರ ಇಷ್ಟೆಲ್ಲಾ ಆದರೂ ಏನೂ ಆಗಿಲ್ಲವೆಂಬಂತೆ ಪ್ರಕರಣವನ್ನು ಹಿಂದಕ್ಕೆ ಪಡೆದಿದೆ’ ಎಂದು ದೂರಿದರು.

ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕುತ್ತಾರೆ. ಕನ್ನಡಪರ ಸಂಘಟನೆಗಳ ಮುಖಂಡರು ಕನ್ನಡಪರ ಹೋರಾಟ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತಾರೆ. ಆದರೆ ಬಾಂಬ್ ಹಾಕಿ, ತಲವಾರುಗಳಿಂದ ಹಲ್ಲೆ ಮಾಡಿದವರಿಗೆ ಶಿಕ್ಷೆ ಕೊಡಿಸುವ ಬದಲು ಪ್ರಕರಣ ವಾಪಸ್ ಪಡೆಯುತ್ತಾರೆ ಎಂದು ನಾರಾಯಣಸ್ವಾಮಿ ಟೀಕಿಸಿದರು.

ನಿಯೋಗದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ಉಪನಾಯಕ ಸುನಿಲ್ ವಲ್ಯಾಪುರೆ, ವಿಧಾನಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ಮತ್ತು ಬಿ.ಜಿ.ಪಾಟೀಲ, ಶಾಸಕ ಅವಿನಾಶ್ ಜಾಧವ್, ಮಾಜಿ ಸಂಸದ ಉಮೇಶ್ ಜಾಧವ್ ಮತ್ತು ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1816897767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.