ಕಲಬುರಗಿ: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ, ‘ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು– ಜನಪರ ಸಂಘಟನೆಗಳ ಒಕ್ಕೂಟ ಕರ್ನಾಟಕ’ ಸಂಘಟನೆಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಸಂಘಟನೆಗಳ ಪ್ರಮುಖರು ಮಾತನಾಡಿ, ‘ಎಸ್ಐಆರ್ ದೇಶದ ಪ್ರಜಾತಂತ್ರದ ಅಡಿಪಾಯವನ್ನು ಬುಡಬೇಲು ಮಾಡುತ್ತಿದೆ ಹಾಗೂ ಸಂವಿಧಾನದ ನಿರ್ದೇಶನಕ್ಕೆ ವಿರುದ್ಧ ದಿಕ್ಕಿನಲ್ಲಿ ದೇಶವನ್ನು ಎಳೆದೊಯ್ಯಲು ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು.

‘ಕರ್ನಾಟಕ ಈ ದುಷ್ಟ ಯೋಜನೆಯನ್ನು ತಿರಸ್ಕರಿಸಲು ತೀರ್ಮಾನಿಸಿದೆ. ತಾತ್ವಿಕವಾಗಿ ವಿರೋಧಿಸಿದರೆ ಸಾಲದು, ಅದಕ್ಕಾಗಿ ಅಗತ್ಯವಿರುವ ಪರಿಣಾಮಕಾರಿ ಕ್ರಮಗಳಿಗೆ ರಾಜ್ಯ ಸರ್ಕಾರ ಮುಂದಾಗಬೇಕಿದೆ’ ಎಂದರು.

‘ಸದ್ಯದ ಸ್ವರೂಪದ ಎಸ್ಐಆರ್ ಅನ್ನು ಒಪ್ಪುವುದಿಲ್ಲ ಎಂದು ಕರ್ನಾಟಕ ಸರ್ಕಾರ ಘೋಷಿಸಬೇಕು. ತಾರ್ಕಿಕ ವ್ಯತ್ಯಾಸ ಎನ್ನುವ ಅತ್ಯಂತ ಅವೈಜ್ಞಾನಿಕ, ಅವಾಸ್ತವಿಕ, ಅಪಾರದರ್ಶಕ ಹಾಗೂ ದುರುದ್ದೇಶಪೂರಿತ ವಿಧಾನವನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಅಳವಡಿಸಬಾರದು. ಸ್ಪೆಲ್ಲಿಂಗ್, ದಿನಾಂಕ ಕ್ಷುಲ್ಲಕ ವಿಚಾರಗಳನ್ನು ಇಟ್ಟುಕೊಂಡು ಮತದಾನದ ಹಕ್ಕಿನಿಂದ ಯಾರನ್ನೇ ಹೊರಗಿಡುವುದು ಅಕ್ಷಮ್ಯ ಅಪರಾಧವಾಗುತ್ತದೆ. ಮತದಾರರ ಪಟ್ಟಿ ಎಂಬುದು ರಹಸ್ಯ ದಾಖಲೆಯಲ್ಲ. ಯಾರ ಮತವನ್ನಾದರೂ ಸುಲಭವಾಗಿ ಹುಡುಕಬಹುದಾದ ರೀತಿಯಲ್ಲಿ, ಪಾರದರ್ಶಕತೆ ಇರುವ ರೀತಿಯಲ್ಲಿ ಅದನ್ನು ‘ಕಂಪ್ಯೂಟರ್ ರೀಡಬಲ್ ಫಾರ್ಮ್ಯಾಟ್’ನಲ್ಲಿ ನೀಡಬೇಕು’ ಎಂದು ಒತ್ತಾಯಿಸಿದರು.

‘ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮುನ್ನ ಚುನಾವಣಾ ಆಯೋಗದ ಮ್ಯಾನ್ಯುಯಲ್ನಲ್ಲಿ ಇರುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು: ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಪ್ರದೇಶಗಳಲ್ಲಿ ಆ ಭಾಗದ ಮತದಾರರ ಕರಡು ಪಟ್ಟಿಯನ್ನು ಬಹಿರಂಗವಾಗಿ ಪ್ರಕಟಿಸಿ, ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಿ, ಮುಕ್ತವಾದ ರೀತಿಯಲ್ಲಿ ಎಲ್ಲರ ಸಮ್ಮುಖದಲ್ಲಿ ತಿದ್ದುಪಡಿಗಳನ್ನು ಮಾಡಬೇಕು. ಈ ಪ್ರಕ್ರಿಯೆಯನ್ನು ಗಡಿಬಿಡಿಯಲ್ಲಿ ನಡೆಸಬಾರದು. ಕನಿಷ್ಠ 1 ವರ್ಷಗಳ ಅವಧಿ ನಿಗದಿ ಮಾಡಬೇಕು. ಮತದಾರರ ಪಟ್ಟಿಯ ಪರಿಶೀಲನೆ ನಡೆಸಿ ಕರಡು ಪಟ್ಟಿ ತಯಾರಿಸಲು ಕರಡನ್ನು ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಲು ಹಾಗೂ ಅಹವಾಲುಗಳನ್ನು ಸ್ವೀಕರಿಸಿ ಅಂತಿಮ ಪಟ್ಟಿ ತಯಾರಿಸಲು 6 ತಿಂಗಳು ಸಮಯ ಇರಬೇಕು’ ಎಂದು ಆಗ್ರಹಿಸಿದರು.

‘ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಅಲೆಮಾರಿಗಳು, ಆದಿವಾಸಿಗಳು, ದಲಿತರು, ಬಡ ಅಲ್ಪಸಂಖ್ಯಾತರು ಮುಂತಾದ ದಾಖಲೆಗಳ ಗಂಭೀರ ಸಮಸ್ಯೆ ಎದುರಿಸುತ್ತಿರುವ ಜನ ವರ್ಗಗಳು ಪ್ರಜಾತಾಂತ್ರಿಕ ಪ್ರಕ್ರಿಯೆಯಿಂದ ವಂಚಿತರಾಗದಂತೆ ಮಾಡಲು ವಿಶೇಷ ಸರಳ ಕ್ರಮಗಳನ್ನು ರೂಪಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದ ಒಬ್ಬ ಅರ್ಹ ಮತದಾರರೂ ತಮ್ಮ ಜನ್ಮಸಿದ್ಧ ಹಕ್ಕನ್ನು ಕಳೆದುಕೊಳ್ಳಲು ರಾಜ್ಯ ಸರ್ಕಾರ ಅವಕಾಶ ನೀಡಬಾರದು’ ಎಂದರು.

ಮುಖಂಡರಾದ ಭೀಮರಾವ ಟಿ.ಟಿ., ಬಂದಪ್ಪ ಪಟ್ನಾಯಕ್, ಮೊಹಮ್ಮದ್ ಅಬ್ದುಲ್ ಖಾದರ್, ಮೊಹಮ್ಮದ್ ಸುಲೇಮಾನ್, ಸುನೀಲ ಮಾನಪಡೆ, ಸಂಧ್ಯಾರಾಜ್ ಸ್ಯಾಮ್ಯುವೆಲ್, ರೇಣುಕಾ ಸಿಂಗೆ, ಬಿ.ಎಂ.ರಾವೂರ, ಮೈಲಾರಿ ದೊಡ್ಡಮನಿ, ಸುಂದರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮೂಲಕ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-34-1606798388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.