ಕಲಬುರಗಿ: ನಿಪುಣ ಕರ್ನಾಟಕ ಅಡಿಯಲ್ಲಿ ಸ್ಟೆಮ್ ಅಭ್ಯರ್ಥಿಗಳಿಗೆ ಶನಿವಾರ ಕಲಬುರಗಿಯ ಶಹಾಬಾದ್ ರಸ್ತೆಯ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಸೈಕೋಮೆಟ್ರಿಕ್ ಅಸೆಸ್ಮೆಂಟ್ ಮತ್ತು ಟೆಕ್ನಿಕಲ್ ಅಸೆಸ್ಮೆಂಟ್ ಆನ್ಲೈನ್ ಮೌಲ್ಯಮಾಪನ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಸುಮಾರು 500ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿದ್ದರು.

ರಾಜ್ಯದ 2 ಮತ್ತು 3ನೇ ಹಂತದ ನಗರಗಳಲ್ಲಿ ಪದವೀಧರರಲ್ಲಿ ಹೆಚ್ಚುತ್ತಿರುವ ಉದ್ಯೋಗಾವಕಾಶದ ಅಂತರ ಪರಿಹರಿಸಲು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆ ಮತ್ತು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಮೂಲಕ ಈ ಪರೀಕ್ಷೆ ನಡೆಸಲಾಗಿದ್ದು, ಅನ್ಸ್ಟಾಪ್ ಸಂಸ್ಥೆ ಸಂಪೂರ್ಣ ಪರೀಕ್ಷೆಯ ನಿರ್ವಹಣೆ ಕೈಗೊಂಡಿತ್ತು.

ಕಳೆದ ಏಪ್ರಿಲ್ ತಿಂಗಳಲ್ಲಿ ಕಲಬುರಗಿಯಲ್ಲಿ ಜರುಗಿದ ಬೃಹತ್ ಉದ್ಯೋಗ ಮೇಳದಲ್ಲಿ ಹಾಜರಾದ 10 ಸಾವಿರ ಅಭ್ಯರ್ಥಿಗಳ ಪೈಕಿ ಆಯ್ದ 2,500 ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಪದವೀಧರರನ್ನು ಗುರಿಯಾಗಿಸಿ ಪ್ರಾಯೋಗಿಕವಾಗಿ ಕಲಬುರಗಿಯಲ್ಲಿ ಮೊದಲ ಬಾರಿಗೆ ಈ ಮೌಲ್ಯಮಾಪನ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ನಂತರ ಅವರ ಕೌಶಲ ಕೊರತೆ ಪತ್ತೆ ಹಚ್ಚಿ ಅಗತ್ಯ ಕೌಶಲ ನೀಡಿ ಅವರನ್ನು ಉದ್ಯೋಗಕ್ಕೆ ಸಿದ್ಧರನ್ನಾಗಿ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ.

ಡಿ.ಸಿ., ಮೇಯರ್ ಭೇಟಿ: ಶನಿವಾರ ಪರೀಕ್ಷೆ ನಡೆದ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವರ್ಷಾ ಜಾನೆ ಭೇಟಿ ನೀಡಿ ಪರೀಕ್ಷೆ ಪ್ರಕ್ರಿಯೆ ವೀಕ್ಷಿಸಿದರು. ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ನಾಗುಬಾಯಿ, ಪ್ರಮುಖರಾದ ಡಾ.ಕಿರಣ ದೇಶಮುಖ, ಶಿಬಾ ಮೆಹತಾ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.