ಕಲಬುರಗಿ: ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿ ಅವರ ತಾಯಿ ಕುಸುಮಾವತಿ ಅವರು ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದ್ದು, ಈ ಬಾರಿ ನಿಷ್ಪಕ್ಷಪಾತ, ನ್ಯಾಯಯುತ ಮರು ತನಿಖೆ ನಡೆಸಬೇಕು. ಆ ಮೂಲಕ ಕೊಂದವರು ಯಾರು ಎಂಬುದನ್ನು ಪತ್ತೆ ಹಚ್ಚಬೇಕು ಎಂದು ರಾಷ್ಟ್ರೀಯ ಮಹಿಳಾ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ಪದ್ಮಾವತಿ ಮಾಲಿಪಾಟೀಲ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಪದ್ಮಿನಿ ಕಿರಣಗಿ ಒತ್ತಾಯಿಸಿದರು.

ನಗರದಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಪ್ರೀಂಕೋರ್ಟಿನ ವಿಭಾಗೀಯ ಪೀಠವು ಮಾರ್ಚ್ 23ರಂದು ನೀಡಿರುವ ನಿರ್ದೇಶನವು ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅತ್ಯಾಚಾರಿಗಳು ಮತ್ತು ಕೊಲೆಗಾರರನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿ ನಡೆಯುತ್ತಿರುವ ದೀರ್ಘಕಾಲದ ಹೋರಾಟಕ್ಕೆ ಸಂದ ಮನ್ನಣೆಯಾಗಿದೆ. ಸುಪ್ರೀಂಕೋರ್ಟಿನ ನೋಟಿಸಿಗೆ ರಾಜ್ಯ ಸರ್ಕಾರ ಮರು ತನಿಖೆಗೆ ಒಪ್ಪಿಕೊಂಡು ಅದನ್ನು ಪ್ರಾಮಾಣಿಕವಾಗಿ ನಡೆಸಬೇಕು ಎಂದರು.

ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರವನ್ನು ಪತ್ತೆಹಚ್ಚದೇ ತನಿಖಾಧಿಕಾರಿಗಳು ತೀವ್ರ ಲೋಪ ಎಸಗಿದ್ದನ್ನು ಸಿಬಿಐ ವಿಶೇಷ ನ್ಯಾಯಾಲಯವು 2023ರಲ್ಲೇ ಸ್ಪಷ್ಟವಾಗಿ ಗುರುತಿಸಿದೆ. ಒಂದು ಅಪರಾಧ ಕೃತ್ಯವು ರಾಜ್ಯದ ವಿರುದ್ಧ ನಡೆಯುವ ಅಪರಾಧವಾಗಿದ್ದು, ಅಂತಹ ಕೃತ್ಯಕ್ಕೆ ತುತ್ತಾದ ಸಂತ್ರಸ್ತರ ಪರವಾಗಿ ರಾಜ್ಯ ಸರ್ಕಾರ ನ್ಯಾಯಾಂಗ ಹೋರಾಟ ನಡೆಸಬೇಕು. ಇದು ಸರ್ಕಾರದ ಕಾನೂನು ಜವಾಬ್ದಾರಿಯೂ ಆಗಿದೆ ಎಂದರು.

ಸೌಜನ್ಯ ಕೊಲೆ ಪ್ರಕರಣ ಅಷ್ಟೇ ಅಲ್ಲದೇ ಧರ್ಮಸ್ಥಳ ಸುತ್ತಮುತ್ತ ನಡೆದ 74 ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನೂ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರೀಯ ಮಹಿಳಾ ಒಕ್ಕೂಟದ ಕಾರ್ಯದರ್ಶಿ ವಿದ್ಯಾಶ್ರೀ ಉಮೇಶ್ ಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-34-1212023238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.