ಕಲಬುರಗಿ: ನಗರದ ಹೃದಯಭಾಗದಲ್ಲಿರುವ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಲೋಕೋಪಯೋಗಿ ಮತ್ತು ಕೆಆರ್ಐಡಿಎಲ್ನಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಮಾಹಿತಿ ಪಡೆದರು.

ಕ್ರೀಡಾಂಗಣ ಆವರಣದಲ್ಲಿನ ವಿವಿಧ ಅಂಕಣಗಳಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ‘ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಕಳಪೆ ಕೆಲಸಗಳಿಗೆ ಅವಕಾಶ ನೀಡಬಾರದು. ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳು ಅಭಿವೃದ್ಧಿಪಡಿಸಬೇಕು’ ಎಂದು ಏಜೆನ್ಸಿಗಳಿಗೆ ಸೂಚಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ರಾಹುಲ್ ಕಾಂಬಳೆ, ಕೆಆರ್ಐಡಿಎಲ್ನ ಅಭಿಷೇಕ್, ಕ್ರೀಡಾ ಇಲಾಖೆಯ ತರಬೇತುದಾರರಾದ ಸಂಜಯ ಬಾಣದ, ರಾಜು ಚವ್ಹಾಣ್, ಪ್ರವೀಣ್ ಪುಣೆ, ಅಶೋಕ್ ಎಂ. ಹಾಗೂ ಕ್ರೀಡಾಂಗಣದ ಇತರೆ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-34-1871172533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.