ಕಲಬುರಗಿ: ‘ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶ ಈ ವರ್ಷವೂ ರಾಜ್ಯದಲ್ಲಿ ಕೊನೆಯ ಸ್ಥಾನದಲ್ಲಿ ಇರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಶಿಕ್ಷಕರು ಶ್ರಮಪಟ್ಟರೂ, ಜಿಲ್ಲೆಯ ದುರ್ಬಲ ಆಡಳಿತ ಮತ್ತು ನಿರ್ಲಕ್ಷ್ಯವೇ ಈ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ’ ಎಂದು ಬಿಜೆಪಿ ವಕ್ತಾರೆ ಡಾ.ಸುಧಾ ಹಾಲಕಾಯಿ ಟೀಕಿಸಿದ್ದಾರೆ. ‘ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ 10ನೇ ತರಗತಿಯ ಹಂತಗಳಲ್ಲಿ ಇಂತಹ ಹೀನಾಯ ಫಲಿತಾಂಶ ಮುಂದುವರಿಯುತ್ತಿರುವುದು ಅಕ್ಷಮ್ಯ. ಇದು ಕೇವಲ ಅಂಕಿಗಳ ವಿಷಯವಲ್ಲ. ಸಾವಿರಾರು ವಿದ್ಯಾರ್ಥಿಗಳ ಕನಸುಗಳು ಮತ್ತು ಭವಿಷ್ಯ ಹಾಳಾಗುತ್ತಿರುವ ಗಂಭೀರ ಪರಿಸ್ಥಿತಿ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೆಕೆಆರ್ಡಿಬಿ ಇನ್ನೂ ಮೌನವಹಿಸಿರುವುದು ಖಂಡನೀಯ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-34-700163813

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.