ಕಲಬುರಗಿ: ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುವ ನಿಟ್ಟಿನಲ್ಲಿ ಮೇ ಕೊನೆಯ ವಾರದಲ್ಲಿ ಬೃಹತ್ ಹೋರಾಟ ರೂಪಿಸಲು ರಾಜ್ಯ ತಳವಾರ, ಪರಿವಾರ ಎಸ್ಟಿ ಹೋರಾಟ ಸಮಿತಿ ನಿರ್ಧರಿಸಿದೆ.

ಹೋರಾಟದ ಮುಂದಿನ ಹಾದಿ ರೂಪಿಸಲು ನಗರದ ಜಿಡಿಎ ಬಡಾವಣೆಯ ನಿಜಶರಣ ಅಂಬಿಗರ ಚೌಡಯ್ಯ ಸ್ಮಾರಕ ಭವನದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಯಿಂದ 6 ಗಂಟೆ ತನಕ ನಡೆದ ತಳವಾರ ಸಮಾಜದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಹೊರಬಿದ್ದಿದೆ.

‘ಬೃಹತ್ ಹೋರಾಟದ ಕುರಿತು ಮೇ 2ರಂದು ಪ್ರಮುಖರೆಲ್ಲ ಸೇರಿ ಇನ್ನೊಂದು ಸುತ್ತಿನ ಉನ್ನತಮಟ್ಟದ ಸಭೆ ನಡೆಸಬೇಕು. ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿ ಅಕ್ರಮವಾಗಿ ಬಂಧಿಸಿದ ಪೊಲೀಸರ ವಿರುದ್ಧ ಹಾಗೂ ಅನುಮತಿ ಪಡೆದಿದ್ದರೂ ಟೆಂಟ್ ಕಿತ್ತಿರುವ ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಬೇಕು. ರಾಜ್ಯದ 29 ಜಿಲ್ಲೆಗಳಲ್ಲಿ ತಳವಾರರಿಗೆ ಎಸ್ಟಿ ಪ್ರಮಾಣ ಪತ್ರ ನೀಡುತ್ತಿದ್ದು, ಅದರಂತೆ ಕಲಬುರಗಿ ಹಾಗೂ ಯಾದಗಿರಿಯಲ್ಲೂ ಎಸ್ಟಿ ಪ್ರಮಾಣ ಪತ್ರ ವಿತರಿಸಲು ಕ್ರಮಹಿಸುವಂತೆ ಸಮುದಾಯದ ಮುಖಂಡರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರನ್ನು ಒತ್ತಾಯಿಸಬೇಕು’ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡ ಸರ್ದಾರ್ ರಾಯಪ್ಪ ‘ನಾವೆಲ್ಲ ಎಸ್ಟಿ ಪ್ರಮಾಣ ಪತ್ರಕ್ಕೆ ಆಗ್ರಹಿಸಿ ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಇತ್ತೀಚೆಗೆ ಜಿಲ್ಲೆಯ ಶಾಸಕರ ಮನೆಗಳ ಎದುರು ಧರಣಿ ಸತ್ಯಾಗ್ರಹವನ್ನೂ ನಡೆಸಿದ್ದೇವೆ. ಆಗ ಜಿಲ್ಲಾ ಉಸ್ತುವಾರಿ ಸಚಿವರು ಮಾತುಕತೆಗೆ ಕರೆದು ಪ್ರಮಾಣಪತ್ರ ಕೊಡಿಸುವ ಭರವಸೆ ನೀಡಿದ್ದರು. ಅದರಿಂದ ಹೋರಾಟ ಮೊಟಕುಗೊಳಿಸಿದ್ದೆವು. ಅರ್ಧಕ್ಕೆ ನಿಲ್ಲಿಸಿದ್ದ ಹೋರಾಟಕ್ಕೆ ಮತ್ತೆ ಚಾಲನೆ ನೀಡಲಾಗುವುದು. ಮೇ ಕೊನೆಯ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲಾಗುವುದು’ ಎಂದರು.

‘ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ಹಮ್ಮಿಕೊಂಡಿದ್ದ ನಮ್ಮ ಹೋರಾಟವನ್ನು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಸೇರಿ ಹತ್ತಿಕ್ಕುವ ಪ್ರಯತ್ನ ಮಾಡಿದೆ. ಏಕಾಏಕಿ ಪೊಲೀಸರು ನಮ್ಮ ಹಲ್ಲೆ ನಡೆಸಿದ್ದಾರೆ, ಟೆಂಟ್ ಕಿತ್ತು ಹಾಕಿದ್ದಾರೆ. ನಮ್ಮದು ರಾಜಕೀಯ ಪ್ರೇರಿತ ಹೋರಾಟ ಎಂದು ಸಚಿವರು ಅಣಕಿಸಿದ್ದಾರೆ. ಈಗೇನು ಚುನಾವಣೆ ನಡೆಯುತ್ತಿದೆಯಾ? ನಮ್ಮ ಹಕ್ಕು ಕೇಳುವುದು ತಪ್ಪಾ? ಸಮಾಜದ ಹಕ್ಕು ಕೇಳುವುದು ರಾಜಕೀಯ ಹೇಗಾಗುತ್ತದೆ?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅವರಳ್ಳಿಯ ರಾಚೋಟೇಶ್ವರ ಮಠದ ಚಿದಾನಂದ ಸ್ವಾಮೀಜಿ ಮತ್ತು ಹುಬ್ಬಳ್ಳಿಯ ವೇದವ್ಯಾಸ ಪೀಠದ ರಾಜಗುರು ಸ್ವಾಮೀಜಿ, ಬಿಜೆಪಿ ಮುಖಂಡ ಅವ್ವಣ್ಣ ಮ್ಯಾಕೇರಿ, ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕರ, ಬಸವರಾಜ ಬೂದಿಹಾಳ, ವಸಂತರಾವ ನರಿಬೋಳಿ, ಸಂಗಣ್ಣ ಇಟಗಾ, ಗುಂಡು ಐನಾಪುರ, ಶಂಕರ ಮ್ಯಾಕೇರಿ, ರಾಜಕುಮಾರ ಉಪಲಿ ಮಾತನಾಡಿದರು.

ಹೋರಾಟ ಸಮಿತಿ ಗೌರವಾಧ್ಯಕ್ಷ ರೇವಣಸಿದ್ಧಪ್ಪಗೌಡ ಕಮಾನಮನಿ, ಬಾಪುಗೌಡ ಮಾಲಿಪಾಟೀಲ, ಅಶೋಕ ಕಂಕಿ, ಪ್ರೇಮ ಕೋಲಿ, ಚಂದ್ರಕಾಂತ ಕಿರಸಾವಳಗಿ, ಸಂತೋಷ ತಳವಾರ ಸೇರಿದಂತೆ 100ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-34-663918990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.