ಕಲಬುರಗಿ: ‘ಕಲಬುರಗಿಯನ್ನು ಸ್ಟಾರ್ ಏರ್ ಸಂಸ್ಥೆಯ ಪ್ರಾದೇಶಿಕ ಹಬ್ ಆಗಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಸ್ಟಾರ್ ಏರ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ವ್ಯವಸ್ಥಾಪಕ ಮೊಹಮ್ಮದ್ ಸೊಹೈಲ್ ಅಹ್ಮದ್ ತಿಳಿಸಿದರು.

ಜೂನ್ 10ರಿಂದ ವಿಮಾನ ಸೇವೆ ಪುನರಾರಂಭವಾಗಲಿರುವ ಕಾರಣ ಕೆಕೆಸಿಸಿಐ ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಟೂರ್ಸ್ ಆಂಡ್ ಟ್ರಾವೆಲ್ಸ್ ಏಜೆಂಟರೊಂದಿಗಿನ ಸಂವಾದ ಸಭೆಯಲ್ಲಿ ಮಾತನಾಡಿದರು.

‘ಇದರಿಂದ ಭವಿಷ್ಯದಲ್ಲಿ ಇನ್ನಷ್ಟು ನಗರಗಳಿಗೆ ಸಂಪರ್ಕ ಕಲ್ಪಿಸಲು ಸಾಧ್ಯವಾಗಲಿದೆ. ನೇರ ಸಂವಾದಕ್ಕೆ ಅವಕಾಶ ಕಲ್ಪಿಸಿದ ಕೆಕೆಸಿಸಿಐ ಕಾರ್ಯ ಶ್ಲಾಘನೀಯ’ ಎಂದರು.

ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ.ಪಪ್ಪಾ ಮಾತನಾಡಿ, ‘ಸುಮಾರು ಎಂಟು ತಿಂಗಳುಗಳ ಬಳಿಕ ವಿಮಾನ ಸೇವೆ ಪುನರಾರಂಭವಾಗುತ್ತಿರುವುದು ಈ ಭಾಗದ ಜನತೆಗೆ ಸಂತಸ ತಂದಿದೆ. ಸರ್ಕಾರ ವಯಾಬಿಲಿಟಿ ಗ್ಯಾಪ್ ಫಂಡ್ ರೂಪದಲ್ಲಿ ಪ್ರೋತ್ಸಾಹ ಧನ ನೀಡಿದ ಕಾರಣ ಇದು ಸಾಧ್ಯವಾಗಿದೆ’ ಎಂದು ಹೇಳಿದರು.

‘ವಿಮಾನ ನಿಲ್ದಾಣದಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಕಲ್ಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಇಲಾಖೆಯು ವಿಶೇಷ ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.

ಪ್ರವಾಸೋದ್ಯಮ ಇಲಾಖೆ ಸಹಾಯಕ ಎಂಜಿನಿಯರ್ ಯೋಗೇಶ ಮಾತನಾಡಿ, ‘ಕಲಬುರಗಿ, ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಕೆಕೆಸಿಸಿಐ ಕೈಗೊಂಡಿರುವ ಪ್ರಯತ್ನ ಶ್ಲಾಘನೀಯ. ಸನ್ನತಿ ಹಾಗೂ ಕನಗನಹಳ್ಳಿ ಸೇರಿದಂತೆ ಅಶೋಕನ ಕಾಲದ ಐತಿಹಾಸಿಕ ತಾಣಗಳು ಜಾಗತಿಕ ಮಟ್ಟದಲ್ಲಿ ಮಹತ್ವ ಹೊಂದಿದ್ದು, ಉತ್ತಮ ವಿಮಾನ ಸೌಕರ್ಯವಿಲ್ಲದೆ, ಪ್ರವಾಸೋದ್ಯಮ ಬೆಳೆಯಲು ಸಾಧ್ಯವಿಲ್ಲ’ ಎಂದರು.

ಟೂರ್ಸ್ ಆಂಡ್ ಟ್ರಾವೆಲ್ಸ್ ಏಜೆಂಟರ ಸಂಘದ ಅಧ್ಯಕ್ಷ ಸಂಧ್ಯಾರಾಜ್ ಮಾತನಾಡಿ, ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಏಜೆಂಟರ ಪಾತ್ರ ಮಹತ್ವದ್ದಾಗಿದ್ದು, ವಿಶೇಷ ರಿಯಾಯಿತಿ ಹಾಗೂ ಉತ್ತೇಜನ ನೀಡಿದರೆ, ವಿಮಾನ ಸೇವೆಗಳ ಪ್ರಚಾರಕ್ಕೆ ಸಹಕಾರಿಯಾಗಲಿದೆ’ ಎಂದರು.

ಕೆಕೆಸಿಸಿಐ ಗೌರವ ಕಾರ್ಯದರ್ಶಿ ಶಿವರಾಜ ವಿ.ಇಂಗಿನಶೆಟ್ಟಿ, ಶರಣಬಸವ ವಿಶ್ವವಿದ್ಯಾಲಯದ ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥ ಕಲ್ಯಾಣರಾವ್ ಪಾಟೀಲ ಮಾತನಾಡಿದರು. ಸಭೆಯಲ್ಲಿ ಏಜೆಂಟರು ಗೋವಾ, ತಿರುಪತಿ, ದೆಹಲಿ, ಅಹಮದಾಬಾದ್ ಹಾಗೂ ಜೈಪುರ ನಗರಗಳಿಗೆ ವಿಮಾನ ಸೇವೆ ಆರಂಭಿಸುವಂತೆ ಸಲಹೆ ನೀಡಿದರು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಬೇಬಿ ಮೊಗೇರ, ಕೆಕೆಸಿಸಿಐ ಪ್ರವಾಸೋದ್ಯಮ ಉಪ ಸಮಿತಿ ಅಧ್ಯಕ್ಷ ವಿನಯ್ ಚಿಕಟವಾರ್, ಸದಸ್ಯರಾದ ಮಂಜುನಾಥ ಜೇವರ್ಗಿ, ರವಿಶಂಕರ್ ಜಾಮದಾರಖಾನಿ, ಅಭಿಜಿತ್ ಪಡಶೆಟ್ಟಿ, ಜಗದೀಶ ಪಾಟೀಲ, ರಾಹುಲ್ ಟೆಂಗಳಿ, ರವಿ ಕೆ.ಪಾಟೀಲ, ಶಾಂತರಡ್ಡಿ, ಅಮೃತ್ ಹಾಗೂ ಟೂರ್ಸ್ ಆಂಡ್ ಟ್ರಾವೆಲ್ಸ್ ಏಜೆಂಟರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-34-1416572669

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.