ಕಲಬುರಗಿ: ‘ನಗರದ ಜನತಾ ಬಜಾರ ವ್ಯಾಪ್ತಿಯ ಬೀದಿಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ನಿಗದಿ ಮಾಡಬೇಕು. ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಏ.27ರಂದು ಬೆಳಿಗ್ಗೆ 11ಗಂಟೆಗೆ ಜನತಾ ಬಜಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ಮಾಡಲಾಗುವುದು’ ಎಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡ ಮಂಜುನಾಥ ನಾಲವಾರ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಕಿರಾಣ ಬಜಾರ್, ಕಪಡಾ ಬಜಾರ್, ಸರಾಫ್ ಬಜಾರ್ ಸೇರಿದಂತೆ ರಸ್ತೆಯ ಮೇಲೆ ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ’ ದೂರಿದರು.

‘ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ನಗರದ ಪ್ರಮುಖ ವೃತ್ತದ ಸಿಗ್ನಲ್ಗಳಲ್ಲಿ ಹಸಿರು ಚಾವಣಿ ಹಾಕಬೇಕು. ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮನೋಹರ ಬೀರನೂರ, ಅಭೀಷೇಕ ಬಾಲಾಜಿ, ಶರಣು ಹೊಸಮನಿ, ಅರವಿಂದ ನಾಟೀಕಾರ ಹಾಗೂ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-34-124257941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.