ಕಲಬುರಗಿ: ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳೊಂದಿಗೆ ಆಹಾರ ಇಲಾಖೆ ಅಧಿಕಾರಿಗಳು ಮಂಗಳವಾರ ಸಭೆ ನಡೆಸಿದರು.

‘ಜಿಲ್ಲೆಯಲ್ಲಿರುವ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ, ರೇಣುಕಾ ಸಕ್ಕರೆ ಕಾರ್ಖಾನೆ, ಉಗಾರ ಸಕ್ಕರೆ ಕಾರ್ಖಾನೆ ಹಾಗೂ ಸಿದ್ಧಸಿರಿ ಸಕ್ಕರೆ ಕಾರ್ಖಾನೆ ಸೇರಿದಂತೆ ಎಲ್ಲಾ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಉಳಿದಿರುವ ಹಣವನ್ನು ಮಾರ್ಚ್ 31ರೊಳಗಾಗಿ ಸಂಪೂರ್ಣವಾಗಿ ಸಂದಾಯ ಮಾಡಬೇಕು’ ಎಂದು ಆಹಾರ ಇಲಾಖೆಯ ಪ್ರಭಾರ ಉಪನಿರ್ದೇಶಕ ಮುನಾವರ್ ದೌಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಹೂಗಾರ ಮಾತನಾಡಿ, ‘ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕಬ್ಬಿನ ಬಿಲ್ ಬಾಕಿ ಇರುವುದರಿಂದ ರೈತರಿಗೆ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ಹಣದ ಅಭಾವ ಉಂಟಾಗಿದೆ. ವೈದ್ಯಕೀಯ ಚಿಕಿತ್ಸೆಗೆ ತೊಂದರೆ ಆಗುತ್ತಿದೆ ಹಾಗೂ ಮದುವೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳು ಸ್ಥಗಿತಗೊಂಡಿವೆ’ ಎಂದು ಆತಂಕ ವ್ಯಕ್ತಪಡಿಸಿದರು.

ನಿಗದಿತ ಅವಧಿಯೊಳಗೆ ರೈತರಿಗೆ ಬಾಕಿ ಹಣ ಪಾವತಿಸದಿದ್ದಲ್ಲಿ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಏಪ್ರಿಲ್ 5ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ರೇವಣಸಿದ್ದಯ್ಯ ಎಂ ಮಠ, ಚೆನ್ನಪ್ಪ ಸಾಹುಕಾರ ಖಣದಾಳ, ಸಿದ್ದು ಸಾಹುಕಾರ್ ಖಣದಾಳ, ಶಂಕರಲಿಂಗ, ಅಯೂಬ್ ಕಂದುಗೋಳ ಮತ್ತಿತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-34-1149833176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.