ವಾಡಿ: ‘ಸೂಗೂರು ಭೋಜಲಿಂಗೇಶ್ವರ ಮಠಕ್ಕೆ ಸಂಪರ್ಕಿಸುವ ರಸ್ತೆ ತುಂಬಾ ಇಕ್ಕಟ್ಟಾಗಿದ್ದು, ಟ್ರಾಫಿಕ್ ವ್ಯವಸ್ಥೆ ಬಗ್ಗೆ ನಿಗಾವಹಿಸಿ ಯೋಜನೆ ರೂಪಿಸಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಏ.11 ಶನಿವಾರ ಭೋಜಲಿಂಗೇಶ್ವರ ನೂತನ ಮಠದ ಲೋಕಾರ್ಪಣೆಗಾಗಿ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸೂಗೂರು ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದರು.

ವೇದಿಕೆ, ಸಾರ್ವಜನಿಕರು ಕುಳಿತುಕೊಳ್ಳುವ ಆಸನ ವ್ಯವಸ್ಥೆ, ವಾಹನಗಳ ನಿಲುಗಡೆ ಸ್ಥಳ, ಕುಡಿಯುವ ನೀರಿನ ವ್ಯವಸ್ಥೆ, ಪರಿಶೀಲನೆ ನಡೆಸಿದ ಅವರು, ಇಡೀ ಕಾರ್ಯಕ್ರಮದ ಸಿದ್ಧತೆ ಕುರಿತು ಅಧಿಕಾರಿಗಳು ಹಾಗೂ ಮಠದ ಭಕ್ತರಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಚಿತ್ತಾಪುರ ಕಂಬಳೇಶ್ವರ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯ, ಸ್ಥಳೀಯ ಭೋಜಲಿಂಗೇಶ್ವರ ಸಂಸ್ಥಾನ ಮಠದ ಹಿರಗಪ್ಪ ತಾತಾ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೈಯ್ಯದ್ ಮಹೀಮೂದ್ ಸಾಹೇಬ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ತಹಶೀಲ್ದಾರ್ ನಾಗಯ್ಯ ಹಿರೇಮಠ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-31-1147811517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.