ಕಲಬುರಗಿ: ‘ಸುಪ್ರೀಂಕೋರ್ಟ್ ಆಗಸ್ಟ್ 21, 22, 23ರಂದು ‘ಸಮಾಧಾನ ಸಮಾರೋಹ’ ವಿಶೇಷ ಲೋಕ ಅದಾಲತ್ ಹಮ್ಮಿಕೊಂಡಿದೆ. ಇದರ ಅಂಗವಾಗಿ ಜಿಲ್ಲೆಯಿಂದ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ ಕಲ್ಪಿಸಿದ್ದು, ಕಕ್ಷಿದಾರರು ಇದರ ಸದುಪಯೋಗ ಪಡೆಯಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಕೋರಿದರು.

‘ಜಿಲ್ಲೆಯ ಸಿವಿಲ್ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಮೋಟಾರು ವಾಹನ ಕಾಯ್ದೆ ಸಂಬಂಧಿತ ಅಪಘಾತ ಪ್ರಕರಣಗಳು, ಚೆಕ್ಬೌನ್ಸ್ನಂಥ ಪ್ರಕರಣಗಳು ಕಳೆದ 10–20 ವರ್ಷಗಳಿಂದ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿವೆ. ಇಂಥ 200 ಪ್ರಕರಣಗಳ ಪಟ್ಟಿಯನ್ನು ಸುಪ್ರೀಂಕೋರ್ಟ್ ನಮಗೆ ಕಳುಹಿಸಿದೆ’ ಎಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

‘200 ಪ್ರಕರಣಗಳ ಇಬ್ಬರೂ ಕಕ್ಷಿದಾರರನ್ನು ಕರೆಯಿಸಿ ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಅದರಂತೆ ನಾವು ಈಗಾಗಲೇ ಎಲ್ಲ 200 ಪ್ರಕರಣಗಳ ಕಕ್ಷಿದಾರರಿಗೆ ನೋಟಿಸ್ ರವಾನಿಸಿದ್ದೇವೆ. ಮೇ 25ರಿಂದ ನಿತ್ಯ 20 ಪ್ರಕರಣಗಳ ಕಕ್ಷಿದಾರರನ್ನು ಆಹ್ವಾನಿಸಿ ಪರಸ್ಪರ ಒಪ್ಪಿಗೆಯ ಮೇರೆಗೆ ರಾಜಿ ಸಂಧಾನಕ್ಕೆ ಯತ್ನಿಸಲಾಗುವುದು. ಒಂದೇ ಸಲಕ್ಕೆ ರಾಜಿಗೆ ಒಪ್ಪದಿದ್ದರೆ ಎರಡ್ಮೂರು ಸುತ್ತಿನ ಮಾತುಕತೆ ನಡೆಸಿ ಪ್ರಕರಣ ಇತ್ಯರ್ಥ ಪಡಿಸಲು ಅವಕಾಶವಿದೆ. ಕಕ್ಷಿದಾರರು ಒಂದೊಮ್ಮೆ ಜಿಲ್ಲೆಯಲ್ಲಿ ಇಲ್ಲದಿದ್ದರೆ ಅಥವಾ ಖುದ್ದು ಹಾಜರಾಗಲು ಸಾಧ್ಯವಾಗದಿದ್ದರೆ ವಿಡಿಯೊ ಕಾನ್ಫೆರೆನ್ಸ್ ಮೂಲಕವೂ ಹಾಜರಾಗಲು ಅವಕಾಶವಿದೆ’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಗೆ ನೀಡಿರುವ ಒಟ್ಟು ಪ್ರಕರಣಗಳ ಪೈಕಿ ಶೇ 70ರಿಂದ ಶೇ 80ರಷ್ಟು ರಾಜಿ ಮಾಡಿಸುವ ಗುರಿ ಹೊಂದಲಾಗಿದೆ. ಈ ಸಂಧಾನ ನಡೆಸಲು ನಮಗೆ ಜುಲೈ ಅಂತ್ಯದ ತನಕ ಸಮಯಾವಕಾಶವಿದೆ. ಅಷ್ಟರೊಳಗೆ ಪ್ರಕರಣಗಳ ಸ್ಥಿತಿಗತಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗುವುದು. ಬಳಿಕ ಸುಪ್ರೀಂಕೋರ್ಟ್ ಆಗಸ್ಟ್ 21, 22, 23ರಂದು ನಡೆಸುವ ವಿಶೇಷ ಲೋಕ ಅದಾಲತ್ನಲ್ಲಿ ಕಕ್ಷಿದಾರರ ಸಮ್ಮುಖದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲಿದೆ’ ಎಂದರು.

‘ಸುಪ್ರೀಂಕೋರ್ಟ್ ಕಳುಹಿಸಿದ ಪಟ್ಟಿಯಲ್ಲಿ ಇಲ್ಲದ ಪ್ರಕರಣಗಳ ಕಕ್ಷಿದಾರರು ಕೂಡ ತಾವು ಇಚ್ಛಿಸಿದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-34-1886550033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.