ಕಲಬುರಗಿ: ನಗರದ ಆಳಂದ ಚೆಕ್ಪೋಸ್ಟ್ನಲ್ಲಿ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಪಾದಚಾರಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎಂಎಸ್ಕೆ ಮಿಲ್ ಪ್ರದೇಶದ ನಿವಾಸಿ, ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಖೈರುನ್ಬೀ ಪಟೇಲ್ (53) ಮೃತರು.

ಮಹಿಳೆಯು ಎಂದಿನಂತೆ ಹೋಟೆಲ್ ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ಆಳಂದ ಕಡೆಯಿಂದ ಬಂದ ಟ್ಯಾಂಕರ್ ಹುಮಾನಾಬಾದ್ ಕಡೆಗೆ ತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ.

ಕಲಬುರಗಿ ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ನಗರದ ಸಂತೋಷ ಕಾಲೊನಿಯಲ್ಲಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚಾಕು ಹಾಗೂ ತಲ್ವಾರ್ನಿಂದ ಹೊಡೆದಾಡಿಕೊಂಡಿದ್ದಾರೆ.

ಈ ಕುರಿತು ಎರಡೂ ಗುಂಪಿನವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು–ಪ್ರತಿದೂರು ದಾಖಲಿಸಿದ್ದಾರೆ.

ಪರ್ವೇಜ್ ನದಾಫ್ ನೀಡಿದ ದೂರಿನನ್ವಯ ಮೂವರ ವಿರುದ್ಧ ಹಾಗೂ ಸುನೀಲ ಶಿರಕೆ ನೀಡಿದ ದೂರಿನನ್ವಯ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-34-131732218

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.