ಕಲಬುರಗಿ: ‘ಕ್ಷಯರೋಗದ ಕುರಿತು ಸಮಾಜದಲ್ಲಿ ತಪ್ಪು ತಿಳಿವಳಿಕೆ ಇದೆ. ಅದನ್ನು ಹೋಗಲಾಡಿಸಲು ಅರಿವು ಮೂಡಿಸುವುದು ಅಗತ್ಯ’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಚೇರಿಯ ಸಂಯುಕ್ತಾಶ್ರಯದಲ್ಲಿ ನಗರದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ರೋಗಿಯನ್ನು ಮುಟ್ಟಿದ ತಕ್ಷಣ ಇದು ಹರಡುವುದಿಲ್ಲ. ಪೂರ್ವಗ್ರಹಗಳನ್ನು ಬಿಡಬೇಕು. ಚಿಕಿತ್ಸೆ ಪಡೆಯಬೇಕು. ಕನಿಷ್ಠ 6 ತಿಂಗಳು ಪೌಷ್ಟಿಕ ಆಹಾರ ಸೇವಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ 80 ಗ್ರಾಮ ಪಂಚಾಯಿತಿಗಳು ಟಿಬಿ ಮುಕ್ತವಾಗಿರುವುದು ಶ್ಲಾಘನೀಯ. ಟಿಬಿ ಮುಕ್ತ ವಾರ್ಡ್ ಮಾಡುವ ಕಡೆಗೆ ಗಮನಕೊಡಬೇಕು. ರೋಗಿಗಳನ್ನು ದತ್ತು ಪಡೆದುಕೊಂಡು ಅವರಿಗೆ ಪೌಷ್ಟಿಕ ಆಹಾರ ಒದಗಿಸುತ್ತಿರುವ ದಾನಿಗಳು ಅಭಿನಂದನೆಗೆ ಅರ್ಹರು’ ಎಂದರು.

ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ‘ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಟಿಬಿ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಘೋಷಣೆ ಮಾಡುತ್ತಿದ್ದೇವೆ. 87,183 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ’ ಎಂದರು.

‘ಜಿಲ್ಲೆಯ ಕೆಲವೊಂದು ಗ್ರಾಮಗಳನ್ನು ತಲುಪಲಾಗಿಲ್ಲ. ತಾಲ್ಲೂಕು ಆರೋಗ್ಯ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಆ ಗ್ರಾಮಗಳಿಗೆ ತೆರಳಿ ಲಕ್ಷಣಗಳಿರುವ ಜನರನ್ನು ಪರೀಕ್ಷೆಗೆ ಒಳಪಡಿಸಬೇಕು. ರೋಗಿಯ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಪೌಷ್ಟಿಕ ಆಹಾರ ಬಹಳ ಮುಖ್ಯ. ಆದ್ದರಿಂದ ಗ್ರಾಮ ಪಂಚಾಯಿತಿಯ ಅನುದಾನದಲ್ಲಿ ಪೌಷ್ಟಿಕ ಆಹಾರ ಒದಗಿಸುವ ಚಿಂತನೆ ಇದೆ’ ಎಂದು ಹೇಳಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಂದ್ರಕಾಂತ ನರಬೋಳಿ ಮಾತನಾಡಿ, ‘ಟಿಬಿ ಸಾಂಕ್ರಾಮಿಕ ರೋಗವಾಗಿದೆ. ಮರಣ ಪ್ರಮಾಣ ಶೇ 10ಕ್ಕೂ ಹೆಚ್ಚು ಇದೆ. ಪರೀಕ್ಷೆ ಹಾಗೂ ಚಿಕಿತ್ಸೆ ಬಹಳ ಮುಖ್ಯ’ ಎಂದರು.

‘ಜಿಲ್ಲೆಯಲ್ಲಿ ಬಡತನ, ವಲಸೆ, ಕೈಗಾರಿಕೆಗಳು, ಸಣ್ಣ ಮನೆಗಳು ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಟಿಬಿ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಖಾಸಗಿ ಆಸ್ಪತ್ರೆಗಳ ಸಹಕಾರದಿಂದ ತಪಾಸಣೆ ಚುರುಕುಗೊಳಿಸಿದ್ದೇವೆ. ರೋಗಿಗಳ ಸಂಪರ್ಕಕ್ಕೆ ಬಂದವರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ’ ಎಂದು ತಿಳಿಸಿದರು.

ಈ ವರ್ಷ ಕ್ಷಯ ಮುಕ್ತವಾಗಿರುವ 43 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಉತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರಿಗೆ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಅಧ್ಯಕ್ಷತೆ ವಹಿಸಿದ್ದರು.

ಆರೋಗ್ಯ ಮತ್ತು ಕುಟುಂಬ ಸೇವೆಗಳ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಸಹ ನಿರ್ದೇಶಕ ಡಾ.ಶಂಕ್ರಪ್ಪ ಮೈಲಾರಿ, ಉಪನಿರ್ದೇಶಕರಾದ ಡಾ.ಎ.ಎಸ್. ರುದ್ರವಾಡಿ ಮತ್ತು ಡಾ.ಶರಣಬಸಪ್ಪ ಗಣಜಲಖೇಡ, ಡಾ.ರುಖಯಾ ಅಸ್ನ ರಬಾ ಹಾಗೂ ಇ.ಎಸ್.ಐ.ಸಿಯ ಕ್ಷಯರೋಗ ನೋಡಲ್ ಅಧಿಕಾರಿ ಡಾ.ಲಾವಣ್ಯ ಪೀಟರ್ ಹಾಜರಿದ್ದರು.

ಜಾಥಾ: ನಗರದ ಜಿಲ್ಲಾಸ್ಪತ್ರೆಯಿಂದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದವರೆಗೂ ಜಾಥಾ ನಡೆಯಿತು. ಬೆಳಿಗ್ಗೆ 9ಕ್ಕೆ ಜಿಲ್ಲಾಸ್ಪತ್ರೆ ಬಳಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಚಾಲನೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-34-1102524681

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.