ಕಲಬುರಗಿ: ನಗರದ ನೆಹರೂ ಗಂಜ್ ಪ್ರದೇಶದ ದರ್ಬಾರ್ ಹೋಟೆಲ್ ಎದುರಿನ ಬ್ಯಾಂಕ್ ಕಾಲೊನಿ ರಸ್ತೆಯ ಎಸ್.ಆರ್.ಕೆ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 9 ಹಾಗೂ 10ರಂದು ಟೆಕ್ನಿಕಲ್ ಕ್ಲಿನಿಕ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಆಯೋಜಿಸಿರುವ ಈ ಕಾರ್ಯಾಗಾರವು ಏಪ್ರಿಲ್ 9ರಂದು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆ ವರೆಗೆ ಹಾಗೂ ಏಪ್ರಿಲ್ 10ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ನಗರದ ಕಪನೂರು ಕೈಗಾರಿಕಾ ವಸಾಹತು ಪ್ರದೇಶದ 3ನೇ ಹಂತದಲ್ಲಿ ಆಟೊ ಪಾರ್ಕ್ ಸ್ಥಾಪನೆಗೆ ಸುಮಾರು 20 ಎಕರೆ ಭೂಮಿ ಕಾಯ್ದಿರಿಸಲಾಗಿದೆ. ಆಟೊ ನಗರ ಸ್ಥಾಪನೆ ಸಂಬಂಧ ವಿವಿಧ ವಿಷಯಗಳ ಕುರಿತು ಈ ಕಾರ್ಯಾಗಾರದಲ್ಲಿ ಸಮಗ್ರವಾಗಿ ಅರಿವು ಮೂಡಿಸಲಾಗುವುದು. ಜಿಲ್ಲೆಯ ಆಟೊ ಮೊಬೈಲ್ ಸೇವೆ ನೀಡುವ ಮಾಲೀಕರು, ಕಾರ್ಮಿಕರು ಭಾಗವಹಿಸಬೇಕು’ ಎಂದು ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್ ಅವರುಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-34-410496366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.