ಬೆಂಗಳೂರು: ಮುಖ್ಯಮಂತ್ರಿ ಅವರು ಈ ಬಾರಿಯ ಬಜೆಟ್ನಲ್ಲಿ ಘೋಷಿಸಿದಂತೆ ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ ‘ಪಿಎಂ ಮಿತ್ರ ಜವಳಿ ಪಾರ್ಕ್’ ಕಾಮಗಾರಿ ಗಳನ್ನು ಚುರುಕುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಇತ್ತೀಚೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಜೆಟ್ ಘೋಷಣೆಯನ್ನು ಕಾಲಮಿತಿಯಲ್ಲಿ ಜಾರಿಗೆ ತರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಸರ್ಕಾರ ನೀಡಿದೆ.

ಸಭೆಯಲ್ಲಿನ ಚರ್ಚಿಸಿದ ಅಂಶಗಳ ಕುರಿತು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಪಾರ್ಕ್ನ ಮೊದಲ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಮೊದಲ ಹಂತದ ಯಶಸ್ವಿ ಅನುಷ್ಠಾನದ ನಂತರವಷ್ಟೇ, ಉದ್ಯೋಗ ಸೃಷ್ಟಿ ಮತ್ತು ಹೂಡಿಕೆ ಪ್ರಮಾಣವನ್ನು ಆಧರಿಸಿ ಎರಡನೇ ಹಂತದ ಅಭಿವೃದ್ಧಿಗೆ ಚಾಲನೆ ನೀಡಲು ಸಭೆ ನಿರ್ಧರಿಸಿದೆ’ ಎಂದು ತಿಳಿಸಿದ್ದಾರೆ.

‘ಕೇಂದ್ರ ಸರ್ಕಾರದ ಅಭಿವೃದ್ಧಿ ಬಂಡವಾಳ ಬೆಂಬಲ(ಡಿಸಿಎಸ್) ಯೋಜನೆಯಡಿ ಒಟ್ಟು ಯೋಜನಾ ವೆಚ್ಚದ ಶೇ30ರಷ್ಟು (ಗರಿಷ್ಠ ₹500 ಕೋಟಿ) ಧನಸಹಾಯ ಸಿಗಲಿದೆ. ಇದನ್ನು ಎರಡು ಹಂತಗಳಲ್ಲಿ ಬಳಸಲಾಗುವುದು. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ಜವಳಿ ಪಾರ್ಕ್ನ ಗೇಟ್ನಿಂದ ಹೊರಗಡೆ ನಡೆಯುವ ಬಾಹ್ಯ ಕಾಮಗಾರಿಗಳನ್ನು ಒಟ್ಟಾರೆ ಅನುದಾನದ ಅರ್ಹತೆಗಾಗಿ ಪರಿಗಣಿಸಬಹುದಾಗಿದೆ. ಆದರೂ, ಕೇಂದ್ರದ ನಿಜವಾದ ಧನಸಹಾಯವನ್ನು ಕೇವಲ ಪಾರ್ಕ್ನ ಒಳಗಿನ ಆಂತರಿಕ ಮೂಲಸೌಕರ್ಯಗಳಾದ ರಸ್ತೆ, ನೀರು, ವಿದ್ಯುತ್, ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಸಿಇಟಿಪಿ) ಮತ್ತು ವಸತಿ ನಿಲಯಗಳಿಗಾಗಿ ಬಳಸಲಾಗುವುದು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

‘ಕಲಬುರಗಿ ಜಿಲ್ಲೆಯ ಆರ್ಥಿಕ ಚಿತ್ರಣ ಬದಲಿಸಬಲ್ಲ ಈ ಜವಳಿ ಪಾರ್ಕ್ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆಗೆ ಅನುವಾಗುವಂತೆ, ರಾಜ್ಯ ಅನುಷ್ಠಾನ ಸಂಸ್ಥೆಯು ಕನಿಷ್ಠ ₹25 ಕೋಟಿ ಹಣವನ್ನು ಭೌತಿಕ ಮೂಲಸೌಕರ್ಯಗಳಿಗೆ ವಿನಿಯೋಗಿಸುವ ಪ್ರಕ್ರಿಯೆಗೆ ಚಾಲನೆ ನೀಡಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು’ ಎಂದೂ ಪ್ರಿಯಾಂಕ್ ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಜವಳಿ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬು ಘೋಯಲ್ ಚೌಧರಿ, ಜವಳಿ ಇಲಾಖೆಯ ಆಯುಕ್ತ ಕೆ.ಬಿ.ಬಸವರಾಜ್, ಕೆಐಎಡಿಬಿ ಸಿಇಒ ಗೋವಿಂದರೆಡ್ಡಿ ಹಾಗೂ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-34-2135575967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.