ಕಲಬುರಗಿ: ‘ತಿಪ್ಪಣ್ಣಪ್ಪ ಕಮಕನೂರ ಅವರನ್ನು ಮುಂದಿನ 6 ವರ್ಷಗಳ ಅವಧಿಗೆ ಪೂರ್ಣಾವಧಿಯ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು’ ಎಂದು ಕಲ್ಯಾಣ ಕರ್ನಾಟಕ ಕೋಲಿ (ಗಂಗಾಮತ) ಸಮಾಜದ ಅಧ್ಯಕ್ಷ ಅಮೃತ ಎಚ್.ಡಿಗ್ಗಿ ಒತ್ತಾಯಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಮಕನೂರ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಹಿಂದುಳಿದ ವರ್ಗಗಳ ಗಟ್ಟಿಧ್ವನಿ ನಾಯಕರಾಗಿ ಎಲ್ಲಾ ಸಮುದಾಯಗಳ ಜನರ ಕಷ್ಟಸುಖಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಬೆಂಗಳೂರು ಮತ್ತು ಕಲಬುರಗಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಪ್ರತಿಷ್ಠಾಪನೆಗೆ ಶ್ರಮಿಸುತ್ತಿದ್ದಾರೆ. ಅವರನ್ನು ಎಂಎಲ್ಸಿ ಜೊತೆಗೆ ಸಚಿವರನ್ನಾಗಿ ಮಾಡಬೇಕು’ ಎಂದರು.

ಅರ್ಜುನ ಜಮಾದಾರ, ಸಂಗಮನಾಥ ಕಣ್ಣಿ, ಸುಖದೇವ ಕೋಗನೂರ, ರಮೇಶ ಎಸ್.ಬಿದನೂರ, ರಾಯಪ್ಪ ಹೊನಗುಂಟಿ, ದತ್ತು ಹೊನ್ನಳ್ಳಿ, ಬಸವರಾಜ ಬಳೂರ್ಗಿ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-34-683336981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.