ಕಲಬುರಗಿ: ‘ತಂಬಾಕು ಬಳಕೆ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಮುಂಬರುವ ಜುಲೈ ಅಂತ್ಯದೊಳಗೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ಒಂದು ಗ್ರಾಮವನ್ನಾದರೂ ತಂಬಾಕು ಮುಕ್ತ ಗ್ರಾಮವನ್ನಾಗಿಸಿ ಘೋಷಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಇದಕ್ಕೆ ಪೂರಕವಾಗಿ ಜೂನ್ ಅಂತ್ಯದೊಳಗೆ ಜಿಲ್ಲೆಯ 261 ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ತಂಬಾಕು ನಿಯಂತ್ರಣ ಸಮಿತಿ ರಚಿಸಿಕೊಂಡು ಗ್ರಾಮ ಸಭೆಯಲ್ಲಿ ತಂಬಾಕು ಮುಕ್ತ ಗ್ರಾಮ ಘೋಷಿಸುವ ಕುರಿತು ಚರ್ಚಿಸಬೇಕು’ ಎಂದರು.

‘ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಗ್ರಾಮಗಳಲ್ಲಿ ಜನಜಾಗೃತಿ ಮೂಡಿಸಬೇಕು. ವಿಶೇಷವಾಗಿ ದುಶ್ಚಟಗಳಿಲ್ಲದ ವ್ಯಕ್ತಿ ಅಥವಾ ಧಾರ್ಮಿಕ ಮುಖಂಡರನ್ನು ರಾಯಭಾರಿ ಆಯ್ಕೆ ಮಾಡಿ ಅವರ ಮೂಲಕ ಹಳ್ಳಿಗಳಲ್ಲಿ ತಂಬಾಕು ತ್ಯಜಿಸುವ ಜಾಗೃತಿ ಮೂಡಿಸಬೇಕು’ ಎಂದರು.

‘ಜಿಲ್ಲೆಯ ಒಟ್ಟು 3,883 ಶಾಲೆಗಳ ಪೈಕಿ 927 ಮತ್ತು 285 ಪದವಿ ಪೂರ್ವ ಕಾಲೇಜುಗಳ ಪೈಕಿ 79 ಕಾಲೇಜುಗಳಲ್ಲಿ ತಂಬಾಕು ಮುಕ್ತ ಶಾಲೆ-ಕಾಲೇಜು ಎಂದು ಘೋಷಿಸಿಕೊಳ್ಳಲಾಗಿದೆ. ಇನ್ನುಳಿದ ಶಾಲಾ ಕಾಲೇಜುಗಳಲ್ಲಿ ಜೂನ್ 25ರೊಳಗೆ ತಂಬಾಕು ಮುಕ್ತ ಪ್ರದೇಶ ಎಂದು ಘೋಷಿಸಿ ವರದಿ ಸಲ್ಲಿಸಬೇಕು’ ಎಂದು ಡಿಡಿಪಿಐ ಮತ್ತು ಡಿಡಿಪಿಯು ಅವರಿಗೆ ರಾಯಪ್ಪ ನಿರ್ದೇಶನ ನೀಡಿದರು.

ವಿಭಾಗೀಯ ತಂಬಾಕು ನಿಯಂತ್ರಣ ಕೋಶದ ಸಂಯೋಜಕ ಮಹಾಂತೇಶ ಉಳ್ಳಾಗಡ್ಡಿ ಮತ್ತು ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಜಾತಾ ಪಾಟೀಲ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಡಿಎಚ್ಒ ಡಾ.ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ರಾಕೇಶ ಕಾಂಬಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಕಲಬುರಗಿ ಟಿಎಚ್ಒ ಡಾ.ಮಾರುತಿ ಕಾಂಬಳೆ, ಅಫಜಲಪುರ ಟಿಎಚ್ಒ ಡಾ.ಚೇತನ್ ದುಮಾಲೆ, ಸಮಾಜ ಸೇವಕಿ ಆರತಿ ಧನಶ್ರೀ, ಮಂಜುನಾಥ ಕಂಬಾಳಿಮಠ, ರವಿಕುಮಾರ ಪೂಜಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-34-378135142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.