ಕಲಬುರಗಿ: ಡಾ.ಮಾಹೂರಕರ ದಂತ ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗಾ ಉತ್ತರ ವತಿಯಿಂದ ತಂಬಾಕು ಮತ್ತು ಗುಟ್ಕಾ ಸೇವಿಸುವವರಿಗೆ ತಪಾಸಣೆ ಹಾಗೂ ಜಾಗೃತಿ ಶಿಬಿರವನ್ನು ನಗರದ ಸರ್ಕಾರಿ ಐಟಿಐ ಕಾಲೇಜು ಎದುರುಗಡೆಯ ಡಾ. ಮಾಹೂರಕರ ದಂತ ಆಸ್ಪತ್ರೆಯಲ್ಲಿ ಮೇ 31ರಂದು ಬೆಳಿಗ್ಗೆ 10.30 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ರೋಟರಿ ಕ್ಲಬ್ ಆಫ್ ಗುಲಬರ್ಗಾ ಉತ್ತರ ಅಧ್ಯಕ್ಷ ಆನಂದ ದಂಡೋತಿ ಮತ್ತು ಆಸ್ಪತ್ರೆಯ ಮುಖ್ಯ ದಂತ ವೈದ್ಯ ಡಾ.ಸುಧೀಂದ್ರ ಮಾಹೂರಕರ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಹೆಸರು ನೋಂದಣಿಗೆ 90366 07457 ಸಂಖ್ಯೆಗೆ ಕರೆ ಅಥವಾ ವಾಟ್ಸ್ಆ್ಯಪ್ ಮಾಡಬೇಕು ಎಂದು ತಿಳಿಸಿದರು.

ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ತಜ್ಞ ಡಾ.ಶರಣ ಹತ್ತಿ ರೋಗಿಗಳಿಗೆ ಮಾರ್ಗದರ್ಶನ ನೀಡುವರು. ಕ್ಯಾನ್ಸರ್ ಲಕ್ಷಣ ಕಂಡುಬಂದರೆ ರೋಗಿಯ ಬಯಾಪ್ಸಿಯನ್ನು ಶೇ 50ರ ರಿಯಾಯಿತಿ ದರದಲ್ಲಿ ಮಾಡಲಾಗುತ್ತದೆ ಎಂದು ಡಾ.ಸುಧೀಂದ್ರ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-34-2076584739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.