ಕಲಬುರಗಿ: ‘ವೇತನ ಬಾಕಿ ಪಾವತಿ ಸೇರಿದಂತೆ ಸಾರಿಗೆ ನೌಕರರ ವಿವಿಧ 8 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ’ ಎಂದು ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಕಲ್ಯಾಣ ಕರ್ನಾಟಕ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಗದ್ದಗಿ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆ ಮೇ 12ರಂದು ಬೆಳಿಗ್ಗೆ 11ಕ್ಕೆ ನಗರದ ಕೋಠಾರಿ ಭವನದಲ್ಲಿ ‘ಮುಷ್ಕರ ಸಿದ್ಧತಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

‘38 ತಿಂಗಳ ವೇತನ ಬಾಕಿ ನೀಡಬೇಕು. 2024ರ ಜನವರಿಯಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು. ಶೇ 25ರಷ್ಟು ವೇತನ ಹೆಚ್ಚಳ ಮಾಡಬೇಕು. ಇತರೆ ಬೇಡಿಕೆಗಳನ್ನು ಕಾಲಮಿತಿಯ ಒಳಗೆ ಈಡೇರಿಸಬೇಕು ಎಂದು ಸಚಿವರಿಗೆ ಮನವಿ ಮಾಡಲಾಗಿತ್ತು. ಆದರೆ, ಅವರು ಶೇ 7ರಷ್ಟು ವೇತನ ಹೆಚ್ಚಳ ಮಾಡುವುದು, 2025ರ ಏಪ್ರಿಲ್ 1ರಿಂದ ವೇತನ ಪರಿಷ್ಕರಣೆಗೆ ಮುಂದಾಗಿರುವುದು ಸಾರಿಗೆ ನೌಕರರಿಗೆ ಎಸಗುತ್ತಿರುವ ಅನ್ಯಾಯ’ ಎಂದು ಅವರು ಹೇಳಿದರು.

‘ಸರ್ಕಾರ ಮುಷ್ಕರದ ಹಿಂದಿನ ದಿನದ ವರೆಗೂ ಕಾಯದೇ, ಕೂಡಲೇ ಜಂಟಿ ಕ್ರಿಯಾ ಸಮಿತಿ ಜೊತೆ ಚರ್ಚಿಸಿ ಸಾರಿಗೆ ನೌಕರರ ನ್ಯಾಯಸಮ್ಮತ ಬೇಡಿಕೆಯನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಎಸ್ಆರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಕಾರ್ಯಾಧ್ಯಕ್ಷ ಸಿದ್ದಪ್ಪ ಪಾಲ್ಕಿ, ಎನ್ಈಕೆಆರ್ಟಿಸಿ ಎಸ್ಸಿ ಮತ್ತು ಎಸ್ಟಿ ಎಂಪ್ಲಾಯಿಸ್ ಅಸೋಸಿಯೇಷನ್ ಜಿಲ್ಲಾ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಹೈಯಾಳಕರ್, ಗಣಪತಿ ಗೋಳಾ, ಸಿದ್ದಲಿಂಗ ನ್ಯಾಮನ್, ಸೂರ್ಯಕಾಂತ ಟೈಗರ್, ನಾಗೀಂದ್ರಪ್ಪ ಚವ್ಹಾಣ, ಮಾರುತಿ ಶಾಖಾ, ಪ್ರಕಾಶ್ ಸುಲೇಪೇಟಕರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-34-881375455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.