ಕಲಬುರಗಿ: ‘ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿ ಬಂದಿವೆ. ಇದನ್ನು ಖಂಡಿಸಿ ಏಪ್ರಿಲ್ 21ರಂದು ಕಲಬುರಗಿಯಿಂದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ತನಕ ಪಾದಯಾತ್ರೆ ನಡೆಸಲಾಗುವುದು’ ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಹೇಳಿದರು.

‘ಕುಲಪತಿಯವರು ವಿಶ್ವವಿದ್ಯಾಲಯವನ್ನು ತಮ್ಮ ಸ್ವಂತ ಆಸ್ತಿಯಂತೆ ಭಾವಿಸಿ ನೇಮಕಾತಿ ನಡೆಸುತ್ತಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ತೆಲಂಗಾಣದವರನ್ನೇ ನೇಮಿಸುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅವರ ತಾಳಕ್ಕೆ ತಕ್ಕಂತೆ ಕುಲಸಚಿವರೂ ಕುಣಿಯುತ್ತಿದ್ದಾರೆ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ವಿವಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನೇಮಕಾತಿಯಲ್ಲಿ ಅಕ್ರಮದ ಮೂಲಕ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ರವಿಕುಮಾರ್ ಆಪ್ತ ಸಹಾಯಕ ಶ್ರೀಕಾಂತ ಎಂಬುವರು ಹುದ್ದೆಗಿಟ್ಟಿಸಿಕೊಂಡ ಆರೋಪವಿದೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಇದಲ್ಲದೇ ಹತ್ತಾರು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ಶಂಕೆಯಿದೆ. ಹೀಗಾಗಿ ವಿಸಿ ಹಟಾವೋ ವಿಶ್ವವಿದ್ಯಾಲಯ ಬಚಾವೋ ಘೋಷಣೆಯೊಂದಿಗೆ ಪಾದಯಾತ್ರೆ ನಡೆಸಲಾಗುವುದು’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ, ರಾಮಸೇನೆ ಜಿಲ್ಲಾಧ್ಯಕ್ಷ ಮಹೇಶ ಕೆಂಭಾವಿ, ಸಾಮಾಜಿಕ ಕಾರ್ಯಕರ್ತ ಮೈಲಾರಿ ದೊಡ್ಡಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-34-984856694

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.