ಕಲಬುರಗಿ: ನಗರದ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 93ರ ವೃದ್ಧೆ ನಾಗಮ್ಮ ಅಣ್ಣಾರಾವ್ ಅವರಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಮಧ್ಯ ಪ್ರವೇಶದಿಂದಾಗಿ ಮೂರು ತಿಂಗಳ ಪೆರೋಲ್ ಸಿಕ್ಕಿದೆ. ಇಬ್ಬರು ಹೆಣ್ಣುಮಕ್ಕಳು ವೃದ್ಧೆಯನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.

ವೃದ್ಧೆಗೆ ಎದ್ದು ಓಡಾಡಲೂ ಆಗುತ್ತಿರಲಿಲ್ಲ. ಈಚೆಗೆ ಜೈಲಿಗೆ ಭೇಟಿ ನೀಡಿದ್ದ ನ್ಯಾ. ಬಿ.ವೀರಪ್ಪ ಅವರು ವೃದ್ಧೆಯ ಸ್ಥಿತಿ ಕಂಡು ಮರುಗಿದ್ದರು. ಅಜ್ಜಿಯ ಶಿಕ್ಷೆಯನ್ನು ಪುನರ್ ಪರಿಶೀಲಿಸಲು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಕರೆ ಮಾಡಿ ತಿಳಿಸಿದ್ದರು.

ತಾತ್ಕಾಲಿಕವಾಗಿ ವೃದ್ಧೆಯನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಾರಾಗೃಹದ ಅಧೀಕ್ಷಕಿ ಆರ್. ಅನಿತಾ ಹಾಗೂ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರಿಗೆ ನ್ಯಾಯಮೂರ್ತಿ ಸೂಚಿಸಿದ್ದರು. ಅದರಂತೆ ಪೆರೋಲ್ ಕೋರಿ ವೃದ್ಧೆ ಅರ್ಜಿ ಸಲ್ಲಿಸಲು ನೆರವು ನೀಡಲಾಗಿತ್ತು. ಜೇವರ್ಗಿ ಪೊಲೀಸ್ ಠಾಣೆಯಿಂದ ವರದಿ ಪಡೆದುಕೊಂಡ ಎಸ್ಪಿ ಅವರು ನಾಗಮ್ಮ ಅವರನ್ನು ಮೂರು ತಿಂಗಳ ತನಕ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದ್ದರು. ಬಂದೀಖಾನೆ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ವೃದ್ಧೆಯನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಯಿತು.

26 ವರ್ಷಗಳ ಹಿಂದಿನ ವರದಕ್ಷಿಣೆ ಪ್ರಕರಣದಲ್ಲಿ ವೃದ್ಧೆಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಮೇಲ್ಮನವಿಯ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನೀಡಿದ್ದ ತೀರ್ಪನ್ನೇ ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿತ್ತು. ಕಳೆದ ಒಂದು ವರ್ಷದಿಂದ ನಾಗಮ್ಮ ಜೈಲಿನಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.