ಕಲಬುರಗಿ: ‘ಸಮಾಜದ ಬಲವರ್ಧನೆಗಾಗಿ ಕುಟುಂಬ ವ್ಯವಸ್ಥೆಗೆ ಮಹತ್ವ ನೀಡಬೇಕಿದೆ. ಜೊತೆಗೆ ಪ್ರತಿಯೊಬ್ಬ ಹಿಂದೂ ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಅಂತರರಾಷ್ಟ್ರೀಯ ಮಟ್ಟದ ಸಂಘಟನಾ ಮಹಾಮಂತ್ರಿ ಮಿಲಿಂದ್ ಪರಾಂಡೆ ಪ್ರತಿಪಾದಿಸಿದರು.

ನಗರದ ಸೇಡಂ ರಸ್ತೆಯ ಎಂಆರ್ಎಂಸಿ ಸ್ಯಾಕ್ ಸಭಾಂಗಣದಲ್ಲಿ ವಿಎಚ್ಪಿಯ ನೂರು ಸಮಿತಿಗಳ ಉದ್ಘಾಟನೆ ಹಾಗೂ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕನ್ಯಾ ಭ್ರೂಣ ಹತ್ಯೆ ನಿರ್ಮೂಲನೆಗೆ ಎಲ್ಲರೂ ಪಣ ತೊಡಬೇಕು. ಡ್ರಗ್ಸ್ ಮುಕ್ತ ಭಾರತಕ್ಕಾಗಿ ಸಂಕಲ್ಪಿಸಬೇಕು. ಈ ಬಗೆಗೆ ಸಮಾಜದಲ್ಲಿ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ವರದಕ್ಷಿಣೆ ನಿರ್ಮೂಲನೆಗೆ ಯುವಜನರು ಮುಂದಾಗಬೇಕು’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಉತ್ತರ ಪ್ರಾಂತ ಗೌರವಾಧ್ಯಕ್ಷ ಲಿಂಗರಾಜಪ್ಪ ಅಪ್ಪ, ಪ್ರಾಂತ ಕಾರ್ಯದರ್ಶಿ ಶಿವಕುಮಾರ ಬೋಳಶೆಟ್ಟಿ, ಪ್ರಾಂತ ಸಹ ಕಾರ್ಯದರ್ಶಿ ಪುಂಡಲೀಕ ದಳವಾಯಿ, ಜಿಲ್ಲಾ ಗ್ರಾಮಾಂತರ ಕಾರ್ಯದರ್ಶಿ ಮಹದೇವ ಅಂಗಡಿ, ಪ್ರಾಂತ ಪ್ರಸಾರ ಪ್ರಮುಖ ದೀಪಕ್ ಬಿ., ಮಾರ್ತಾಂಡ ಶಾಸ್ತ್ರಿ, ರಾಮಚಂದ್ರ ಸುಗೂರ, ಸಾಗರ ರಾಠೋಡ, ರಾಘವೇಂದ್ರ ಗುತ್ತೇದಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-34-2081217593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.