ಕಲಬುರಗಿ: ‘ವಿಐಪಿ ಪಕ್ಷವು ರಾಷ್ಟ್ರೀಯ ಅಧ್ಯಕ್ಷ ಮುಖೇಶ್ ಸುಹಾನಿ ಅವರ ನೇತೃತ್ವದಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಜನಸಾಮಾನ್ಯರ ಪರ ಕೆಲಸ ಮಾಡುತ್ತಿದೆ. ಇದೀಗ ಕರ್ನಾಟಕದಲ್ಲಿಯೂ ಪಕ್ಷ ಸಂಘಟನೆಗೆ ವಿಶೇಷ ಆದ್ಯತೆ ನೀಡಿದ್ದು, ಹಿಂದುಳಿದ ಸಮುದಾಯಗಳ ಸಂಘಟನೆ ಮತ್ತು ರಾಜಕೀಯ ಶಕ್ತಿಕರಣವೇ ಪಕ್ಷದ ಮುಖ್ಯ ಉದ್ದೇಶವಾಗಿದೆ’ ಎಂದು ಪಕ್ಷದ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಬಿ.ಕೆ. ಮೋಹನಕುಮಾರ್ ಹೇಳಿದರು.

ನಗರದಲ್ಲಿ ಭಾನುವಾರ ರಾಷ್ಟ್ರೀಯ ಕೋಲಿ, ಬೆಸ್ತ, ನಿಶಾದ್ ಹಾಗೂ ಹಿಂದುಳಿದ ವರ್ಗಗಳ ಮಠಾಧೀಶರ ಮಹಾಸಭಾ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ವಿಕಾಸಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಕೋಲಿ, ಬೆಸ್ತ, ನಿಶಾದ್ ಸೇರಿದಂತೆ ಅನೇಕ ಹಿಂದುಳಿದ ಸಮುದಾಯಗಳಿಗೆ ರಾಜಕೀಯ ಅವಕಾಶಗಳು ಕಡಿಮೆಯಾಗಿದ್ದು, ಅವರ ಹಕ್ಕು ಮತ್ತು ಪ್ರಾತಿನಿಧ್ಯಕ್ಕಾಗಿ ವಿಐಪಿ ಪಕ್ಷ ಹೋರಾಟ ನಡೆಸಲಿದೆ. ಪ್ರಾದೇಶಿಕ ಪಕ್ಷಗಳ ಅಗತ್ಯ ಇಂದು ಹೆಚ್ಚಾಗಿದ್ದು, ಅವಕಾಶ ವಂಚಿತ ಸಮುದಾಯಗಳ ಸೇವೆಗೆ ಪಕ್ಷ ಬದ್ಧವಾಗಿದೆ’ ಎಂದು ಹೇಳಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಮಾತನಾಡಿ, ‘ರಾಜ್ಯದಲ್ಲಿ ಅತಿ ಹಿಂದುಳಿದ ಸಮುದಾಯಗಳಿಗೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿಐಪಿ ಪಕ್ಷ ಹಿಂದುಳಿದ ವರ್ಗಗಳ ಧ್ವನಿಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ’ ಎಂದು ಸಲಹೆ ನೀಡಿದರು.

ಬ್ರಹ್ಮಶ್ರೀ ರಾಜುಗುರು ಸ್ವಾಮಿ, ಸಂಗನಬಸವ ಸ್ವಾಮೀಜಿ, ಚಿದಾನಂದ ಸ್ವಾಮೀಜಿ, ರವಿಶಂಕರ್ ಸ್ವಾಮೀಜಿ, ಅಭಿನವ ಅಂಬಿಗರ ಚೌಡಯ್ಯ ಮೂಲಗದ್ದುಗೆ ಸ್ವಾಮಿ ಸೇರಿದಂತೆ ಅನೇಕ ಮಠಾಧೀಶರು, ಮುಖಂಡರು ಹಾಗೂ ವಿವಿಧ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-34-621177006

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.