ಕಲಬುರಗಿ: ‘ನಗರಾಭಿವೃದ್ಧಿ ಪ್ರಾಧಿಕಾ ರದ ಆವರಣದಲ್ಲಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಮೂರ್ತಿಯನ್ನು ಕೂಡಲೇ ಸ್ಥಾಪಿಸಬೇಕು’ ಎಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸಚಿನ್ ಫರಹತಾಬಾದ್ ಆಗ್ರಹಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಮನವಿ ಸಲ್ಲಿಸಿದ ಅವರು, ‘2011ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಅವಧಿಯಲ್ಲಿ ಕಲಬುರಗಿ ನಗರದ ಹೊಸ ಜೇವರ್ಗಿ ರಸ್ತೆಯ ಪಕ್ಕದಲ್ಲಿ ಸ್ವಾಮಿ ವಿವೇಕಾನಂದರ ಮೂರ್ತಿ ಸ್ಥಾಪನೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದರೂ, ಇಂದಿಗೂ ಮೂರ್ತಿ ಸ್ಥಾಪನೆ ಕಾರ್ಯ ಪೂರ್ಣಗೊಂಡಿಲ್ಲ. ಸ್ವಾಮಿ ವಿವೇಕಾನಂದರ ಮೂರ್ತಿಯನ್ನು ಸುಮಾರು 15 ವರ್ಷಗಳಿಂದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಒಂದು ಕೋಣೆಯಲ್ಲಿ ಇಟ್ಟು ನಿರ್ಲಕ್ಷ್ಯ ವಹಿಸಿರುವುದು ದುರದೃಷ್ಟಕರ ಸಂಗತಿ. ವಿಶ್ವದಾದ್ಯಂತ ಭಾರತದ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಯುವಶಕ್ತಿಯ ಸಂದೇಶ ಸಾರಿದ ಮಹಾನ್ ಚೇತನರ ಮೂರ್ತಿಗೆ ಈ ರೀತಿಯ ನಿರ್ಲಕ್ಷ್ಯ ತೋರಿರುವುದು ಅವಮಾನಕರ. ಕೂಡಲೇ ನಗರಾಭಿವೃದ್ಧಿ ಪ್ರಾಧಿಕಾರವು ಸ್ವಾಮಿ ವಿವೇಕಾನಂದರ ಮೂರ್ತಿಯನ್ನು ತನ್ನ ಆವರಣದಲ್ಲಿ ಸ್ಥಾಪಿಸಬೇಕು. ಒಂದು ತಿಂಗಳೊಳಗಾಗಿ ಈ ಕಾರ್ಯಕ್ಕೆ ಚಾಲನೆ ನೀಡದಿದ್ದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುರೇಶ್ ಹನಗುಡಿ, ಅಕ್ಷಯ, ಗುಡ್ಡು ಸಿಂಗ್, ಅಣವೀರ ಪಾಟೀಲ, ಶಿವಕುಮಾರ ಯಾದವ, ಪಿಂಟು ಜಮಾದಾರ, ಹುಲಿಕಂಠ, ಮಲ್ಲು, ದರ್ಶನ ಹಾಗೂ ಶ್ರೀಮಂತ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-34-326863455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.