ಕಲಬುರಗಿ: ಕಮಲಾಪುರ ತಾಲ್ಲೂಕಿನ ವಿ.ಕೆ.ಸಲಗರ ಗ್ರಾಮದಲ್ಲಿ ಮೇ 26ರಂದು ಮಧ್ಯಾಹ್ನ 12ಕ್ಕೆ ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೂರ್ತಿ ಅನಾವರಣ ಸಮಿತಿ ಅಧ್ಯಕ್ಷ ರಾಜಕುಮಾರ ಸಲಗರ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಚಲೋಹದಲ್ಲಿ 11 ಅಡಿ ಎತ್ತರದ ಅಂಬೇಡ್ಕರ್ ಮೂರ್ತಿ ಮಾಡಿಸಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಮೂರ್ತಿ ಅನಾವರಣ ಮಾಡುವರು. ಬೀದರ್ ಜಿಲ್ಲೆಯ ಅಣದೂರಿನ ಭಂತೆ ಧಮ್ಮಾನಂದ ಮಹಾಥೆರೋ ಹಾಗೂ ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು’ ಎಂದರು.

‘ಶಾಸಕ ಬಸವರಾಜ ಮತ್ತಿಮಡು ಅಧ್ಯಕ್ಷತೆ ವಹಿಸುವರು. ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಶರಣು ಸಲಗರ, ಮಹಾನಗರ ಪಾಲಿಕೆಯ ಮೇಯರ್ ವರ್ಷಾ ಜಾನೆ ಭಾಗವಹಿಸುವರು’ ಎಂದರು.

‘ಕಾರ್ಯಕ್ರಮದಲ್ಲಿ ಸಾಧಕರನ್ನು ಗೌರವಿಸಲಾಗುವುದು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಬಾಬುರಾವ ಗುರೋಡೆ, ಶರಣಗೌಡ ಪಾಟೀಲ, ಸಂಜೀವಕುಮಾರ ಶೆಟ್ಟಿ, ಗೌತಮ ಕಾಂಬಳೆ, ಬಾಬುರಾವ ಗುಬ್ಬನ್, ಅಂಬಾರಾವ ಎಲಂತ್ರಿ, ಬಲಭೀಮ ಸಾಂಗ್ಲಿ ಸೇರಿ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-34-1310486795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.