ಕಲಬುರಗಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಮೇ 30ರಂದು ‘ಕರ್ನಾಟಕ ಪ್ರತಿರೋಧ’ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳ ಒಕ್ಕೂಟದ ಮುಖಂಡ ಭೀಮರಾವ ಟಿ.ಟಿ. ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಚುನಾವಣಾ ಆಯೋಗವು ದೇಶವ್ಯಾಪಿ ಕೋಟ್ಯಂತರ ಜನರ ಮತದಾನದ ಹಕ್ಕನ್ನು ಕಸಿಯಲು ಹೊರಟಿದೆ. ಈಗಾಗಲೇ 13 ರಾಜ್ಯಗಳಲ್ಲಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಹಾಕಲಾಗಿದೆ. ಇದರಲ್ಲಿ ಕನಿಷ್ಠ 5 ಕೋಟಿ ಅರ್ಹ ಮತದಾರರಿದ್ದಾರೆ’ ಎಂದರು.

‘ಮೇ 30ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಗುವುದು. ಬಳಿಕ ಎಸ್ಐಆರ್ ಬಗ್ಗೆ ಅಗತ್ಯ ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಮುಖಂಡ ಲಕ್ಷ್ಮಣ ಮಂಡಲಗೇರಾ ಮಾತನಾಡಿ, ‘ಎಸ್ಐಆರ್ ಜನಸ್ನೇಹಿಯಾಗಿಲ್ಲ. ಪ್ರತಿಯೊಬ್ಬರೂ ತಮ್ಮ ಹೆಸರು 2025ರ ಮತದಾರರ ಪಟ್ಟಿಯಲ್ಲಿ ಮಾತ್ರವಲ್ಲ, 2002ರ ಮತದಾರರ ಪಟ್ಟಿಯಲ್ಲೂ ಇತ್ತು ಅಥವಾ ತನ್ನ ತಂದೆ–ತಾಯಿ ಹೆಸರು ಇದ್ದವು ಎಂದು ನಿರೂಪಿಸಬೇಕಿದೆ. ಇಲ್ಲದಿದ್ದರೆ 11 ದಾಖಲಾತಿಗಳಲ್ಲಿ ಒಂದನ್ನು ನೀಡಬೇಕಾಗುತ್ತದೆ. ಒಂದು ಸಣ್ಣ ಕಾಗುಣಿತ ತಪ್ಪಿದ್ದರೂ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಜನ ದೊಡ್ಡ ನಗರ, ಪಟ್ಟಣ ಪ್ರದೇಶಗಳಿಗೆ ದುಡಿಯಲು ಹೋಗಿ ರುತ್ತಾರೆ. ಒಂದು ತಿಂಗಳ ಅವಧಿ ಸಾಕಾಗುವುದಿಲ್ಲ. ಹಾಗಾಗಿ, 6 ತಿಂಗಳ ಕಾಲಾವಕಾಶ ನೀಡಬೇಕು. ಹಳ್ಳಿಗಳಲ್ಲಿ ಎಸ್ಐಆರ್ ಬಗ್ಗೆ ಮಾಹಿತಿ ಇಲ್ಲ. ಗ್ರಾಮ ಸಭೆ, ವಾರ್ಡ್ ಸಭೆಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು. ಇತರೆ ರಾಜ್ಯಗಳಂತೆ ನಮ್ಮಲ್ಲೂ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂಬುದೇ ನಮ್ಮ ಕಳಕಳಿ’ ಎಂದರು. ಪ್ರಮುಖರಾದ ಮಹಾಂತಪ್ಪ ಸಂಗಾವಿ, ರೇಣುಕಾ ಸಿಂಗೆ, ಸಲೀಂ ಅಹ್ಮದ್, ಮೈಲಾರಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-34-71947612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.