ಕಲಬುರಗಿ: ನೀರು ಭೂಮಿ ಮೇಲೆ ಸಿಗುವ ಜೀವ ಜಲ. ಇದು ರಾಷ್ಟ್ರೀಯ ಆಸ್ತಿಯಾಗಿದೆ. ಪ್ರತಿ ಮನೆಯಲ್ಲಿ ಮಿತ ನೀರು ಬಳಕೆಯೊಂದಿಗೆ ನೀರಿನ ಸಂರಕ್ಷಣೆ ಮತ್ತು ಮಳೆನೀರು ಕೊಯ್ಲು ಉಪಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಭವಿಷ್ಯದ ಪೀಳಿಗೆಗೆ ಅಂತರ್ಜಲ ಮಟ್ಟ ಕಾಯ್ದುಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಹೇಳಿದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಂದಿಕೂರ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ನಂದಿಕೂರ ಗ್ರಾಮದಲ್ಲಿ ಆಯೋಜಿಸಿದ್ದ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ನೀರಿನ ಅವಶ್ಯಕತೆ ಮತ್ತು ಜವಾಬ್ದಾರಿಯುತ ಬಳಕೆಯ ಮಹತ್ವವನ್ನು ಒತ್ತಿ ಹೇಳಿದರು.

ಅನಗತ್ಯ ನಲ್ಲಿಯಿಂದ ನೀರು ಪೋಲಾಗದಂತೆ ನೋಡಿಕೊಳ್ಳಿ ಎಂದರು.

ಮನೆ ಮಟ್ಟದಲ್ಲಿ ಸೋಕ್ ಪಿಟ್ಗಳು ಮತ್ತು ಸಮುದಾಯ ಮಟ್ಟದಲ್ಲಿ ಲೀಚ್ ಪಿಟ್ಗಳು ಮತ್ತು ರೀಚಾರ್ಜ್ ಪಿಟ್ಗಳು, ಜೊತೆಗೆ ಛಾವಣಿ ಮಳೆ ನೀರು ಕೊಯ್ಲು ರಚನೆಗಳ ಕುರಿತು ಪ್ರಾಯೋಗಿಕ ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದಲ್ಲದೆ ಜಿಲ್ಲೆಯಾದ್ಯಂತ ನೀರಿನ ಸಾಕ್ಷರತೆ, ಅಂತರ್ಜಲ ಸಂರಕ್ಷಣೆ ಮತ್ತು ಸುಸ್ಥಿರ ನೀರಿನ ನಿರ್ವಹಣೆಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಜಾಗೃತಿ ಉಂಟು ಮಾಡುವ ಕೆಲಸ ಜಿಲ್ಲಾ ಪಂಚಾಯಿತಿ ಮಾಡುತ್ತಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಜಲ ಮೂಲಗಳಾದ ಕೆರೆ, ಬಾವಿ, ಕೊಳವೆ ಬಾವಿ, ಗುಮ್ಮಿ, ಪುಷ್ಕರಣಿಗಳಂತಹ ಜಲ ಮೂಲಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಜೊತೆಗೆ ಹಳ್ಳಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.

ಕಲುಷಿತ ನೀರು ಸೇವನೆಯಿಂದ ಯಾವುದೇ ಅವಘಡ ಸಂಭವಿಸಿದಲ್ಲಿ ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿ ಇಒ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯವರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೇಸಿಗೆ ಸಮಯ ಇರುವುದರಿಂದ ನೀರು ಸರಬರಾಜು ವ್ಯವಸ್ಥೆಯಲ್ಲಿ ಸಣ್ಣಪುಟ್ಟ ದುರಸ್ತಿಗಳಿದ್ದಲ್ಲಿ ಕೂಡಲೇ ಸರಿಪಡಿಸಿ ನೀರು ಪೋಲಾಗುವುದನ್ನು ತಡೆಯಬೇಕು. ನೀರಿನ ಅಭಾವ ಕಂಡುಬಂದಲ್ಲಿ ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಪ್ರಸ್ತುತ ಜಿಲ್ಲಾ ಪಂಚಾಯಿತಿ ಬಳಿ 5 ಸರ್ಕಾರಿ ಟ್ಯಾಂಕರ್ಗಳಿವೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಣ್ಮಣ ಶೃಂಗೇರಿ, ಸಹಾಯಕ ಕಾರ್ಯದರ್ಶಿ ರೇವಣಸಿದ್ದಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಜಗದೇವಪ್ಪ ಜೀವಣಗಿ, ಪಿ.ಡಿ.ಒ ಸಂದೀಪ ಗುತ್ತೇದಾರ ಹಾಗೂ ಇತರೆ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-34-177748406

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.