ಕಲಬುರಗಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ನಾರಾಯಣಪುರದ ಬಸವಸಾಗರ ಜಲಾಶಯದಿಂದ 2 ಟಿಎಂಸಿ ಅಡಿ ನೀರು ಹರಿಸುವಂತೆ ಯೋಜನಾ ಆಯೋಗದ ಉಪಾಧ್ಯಕ್ಷರೂ ಆದ ಆಳಂದ ಶಾಸಕ ಬಿ.ಆರ್.ಪಾಟೀಲ ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

ಶಿವಕುಮಾರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರೊಂದಿಗೆ ಭೇಟಿ ಮಾಡಿದ ಬಿ.ಆರ್.ಪಾಟೀಲ, ‘ಗಡಿಭಾಗದ ತಾಲ್ಲೂಕುಗಳಾದ ಇಂಡಿ, ಆಲಮೇಲ, ಅಫಜಲಪುರ, ಜೇವರ್ಗಿ, ಕಲಬುರಗಿ ಭಾಗದಲ್ಲಿ ಭೀಮಾ ನದಿ ಬತ್ತಿಹೋಗುತ್ತಿದೆ. ಇಂಡಿ ತಾಲ್ಲೂಕಿನ ಭುಂಯಾರ, ಕಡ್ಲೇವಾಡ, ಆಲಮೇಲದ ಕಡಣಿ, ಅಫಜಲಪುರದ ಘತ್ತರಗಿ, ಗಾಣಗಾಪುರ, ಚಿನ್ಮಳ್ಳಿ, ಸೊನ್ನ, ಕಲಬುರಗಿ ತಾಲ್ಲೂಕಿನ ಸರಡಗಿ, ಚಿತ್ತಾಪುರದ ಬೆಳಗುಂಪಾ ಮತ್ತಿತರ 9 ಬ್ಯಾರೇಜ್ಗಳಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಿದೆ. ಕಲಬುರಗಿ ಜಿಲ್ಲೆಯ ಹಲವು ತಾಲ್ಲೂಕುಗಳು ಹಾಗೂ ಕಲಬುರಗಿ ನಗರದ ಬಹುತೇಕ ಕುಡಿಯುವ ನೀರಿನ ಯೋಜನೆಗಳು ಭೀಮಾ ನದಿಯ ಏತ ನೀರಾವರಿಯನ್ನು ಅವಲಂಬಿಸಿವೆ. ಭೀಮಾ ನದಿ ಬತ್ತಿ ಹೋಗಿದ್ದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಆಳಂದ ತಾಲ್ಲೂಕಿನ ಭೀಮಾ ನದಿಯ ಅಚ್ಚುಕಟ್ಟು ಪ್ರದೇಶದ ಮೇಲೂ ಅತ್ಯಂತ ಕೆಟ್ಟ ಪರಿಣಾಮ ಬೀರಿದೆ’ ಎಂದಿದ್ದಾರೆ. ಇದಕ್ಕೆ ಪರಿಹಾರವಾಗಿ ನಾರಾಯಣಪುರ ಜಲಾಶಯದಿಂದ ಇಂಡಿ ಶಾಖಾ ಕಾಲುವೆಯ ಮೂಲಕ ನೀರು ಹರಿಸಿದರೆ ಸಮಸ್ಯೆ ಬಗೆಹರಿಸಬಹುದು. ಆದ್ದರಿಂದ ತುರ್ತಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.