ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಬರುವ ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಕಲಬುರಗಿ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಸಂಭವಿಸಬಹುದಾದ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಕುರಿತು ಚರ್ಚಿಸಲು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ಸಮಿತಿ ಸಭೆ ಜರುಗಿತು.

ಸಭೆಯಲ್ಲಿ ಇಡೀ ಕ್ಷೇತ್ರದಲ್ಲಿ ಎದುರಾಗಿರುವ ನೀರಿನ ಸಮಸ್ಯೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಎಲ್ಲೆಲ್ಲಿ ಕೊಳವೆಬಾವಿ ನೀರಿಲ್ಲದೆ ಬತ್ತಿ ಹೋಗಿವೆಯೋ ಅಲ್ಲೆಲ್ಲಾ ಹೊಸ ಕೊಳವೆಬಾವಿ ಕೊರೆಯಿಸುವ ಬಗ್ಗೆ ಸಭೆಯಲ್ಲಿ ಶಾಸಕರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಎಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡಿದೆಯೋ ಅಲ್ಲೆಲ್ಲಾ ತಕ್ಷಣ ನೀರಿನ ಸಮಸ್ಯೆ ಬಗೆಹರಿಸಬೇಕು. ಕೊಳವೆಬಾವಿ ಕೊರೆದರೂ ನೀರು ಬಾರದ ಸ್ಥಳಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಶಾಸಕರು ಸೂಚಿಸಿದರು. ಕೊಳವೆಬಾವಿ ಹಾಕುವುದು, ಬೋರ್ ಹಾಕಿದ್ದರೂ ಕರೆಂಟ್ ಸಂಪರ್ಕ ಇಲ್ಲದ ಸಂದರ್ಭಗಳು ಕಂಡಲ್ಲಿ ತಕ್ಷಣ ಸಂಪರ್ಕ ಕಲ್ಪಿಸಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಕಾಡದಂತೆ ಅಗತ್ಯ ಕ್ರಮಗಳಿಗೆ ಸೂಚಿಸಿದರು.

ಅಧಿಕಾರಿಗಳಾದ ಆನಂದ ಸೀಲ, ಸೈಯದ್ ಪಟೇಲ್, ರಾಮಚಂದ್ರ ಬಿ.ಕೆ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಜಲ ಜೀವನ ಮಿಷನ್ ಅಧಿಕಾರಿಗಳು ಸೇರಿದಂತೆ ಅನೇಕರು ಸಭೆಯಲ್ಲಿ ಹಾಜರಿದ್ದು ನೀರಿನ ಸಮಸ್ಯೆ ಸೇರಿದಂತೆ ದಕ್ಷಿಣ ಮತಕ್ಷೇತ್ರದಲ್ಲಿನ ಅನೇಕ ಸಂಗತಿಗಳನ್ನು ಶಾಸಕರ ಗಮನಕ್ಕೆ ತಂದು ಪರಿಹಾರೋಪಾಯಗಳ ಬಗ್ಗೆ ವಿಸ್ತೃತ ಚರ್ಚೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-34-1556230926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.