ಕಲಬುರಗಿ: ‘ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಂಚಾಯಿತಿಗಳಲ್ಲಿ ಹಣವಿಲ್ಲ. ಚುನಾಯಿತ ಪ್ರತಿನಿಧಿಗಳಿಲ್ಲ’ ಎಂದು ಶಾಸಕ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಬೇಸರಿಸಿದರು.

‘ಪಿಡಿಒಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ನನ್ನ ಫೋನ್ ಕರೆಯನ್ನೂ ಸ್ವೀಕರಿಸುವುದಿಲ್ಲ’ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ಕಳೆದ ವರ್ಷ ಉತ್ತಮ ಮಳೆಯಾಗಿ ಕೆರೆಗಳು ಭರ್ತಿಯಾಗಿದ್ದವು. ಈ ವರ್ಷ ತಾಪಮಾನ ಹೆಚ್ಚುತ್ತಿದೆ. ನೀರಿನ ಸಮಸ್ಯೆ ಶುರುವಾಗಿದೆ. ಹಳ್ಳಿಗಳಲ್ಲಿ ಜಾನುವಾರುಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಯ ತುರ್ತು ಕಾಮಗಾರಿಗಳಿಗೆ ₹45 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಆದರೆ, ನನ್ನ ಕ್ಷೇತ್ರ ವೊಂದರಿಂದಲೇ ₹4.37 ಕೋಟಿ ಅನುದಾನಕ್ಕೆ ಬೇಡಿಕೆ ಇದೆ. ಬೇಡಿಕೆಗೆ ತಕ್ಕಂತೆ ಅನುದಾನ ಬಿಡುಗಡೆ ಮಾಡಬೇಕು’ ಎಂದು ಅವರು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-51-2056596719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.