ಕಲಬುರಗಿ: ನಗರವೂ ಸೇರಿದಂತೆ ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ (ಸಿಪಿಐ) ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಸೇರಿದ ಸಿಪಿಐ ಕಾರ್ಯಕರ್ತರು ಪಾಲಿಕೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ವಿರುದ್ಧ ಘೋಷಣೆ ಮೊಳಗಿಸಿದರು.

‘ಕಲಬುರಗಿ ನಗರದ ಮತ್ತು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಅದನ್ನು ನಿರ್ವಹಿಸಲು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯಿತಿ ಆಡಳಿತ ಸಂಪೂರ್ಣ ವಿಫಲವಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.

‘ಜನರು ಶುದ್ಧವಾದ ಕುಡಿಯುವ ನೀರು ಸಿಗದೇ ತತ್ತರಿಸುತ್ತಿದ್ದಾರೆ. ಕುಡಿಯುವ ನೀರಿಗಾಗಿ ದಿನವಿಡೀ ಒಡಾಡುವ ಪರಿಸ್ಥಿತಿ ಎದುರಾಗಿದೆ. ಕೆಲವೆಡೆ ನೀರು ದೊರೆತರೂ ಅದು ಗಡಸು ನೀರಾಗಿದ್ದು, ಕುಡಿಯಲು ಯೋಗ್ಯವಾಗಿಲ್ಲ. ಒಂದೆಡೆ ಜನ ಬಿರುಬಿಸಿಲು, ಬಿಸಿಗಾಳಿಯಿಂದ ತತ್ತರಿಸುತ್ತಿದ್ದರೆ, ಇನ್ನೊಂದೆಡೆ ಕುಡಿಯಲು ನೀರು ಸಿಗದೇ ನೀರಿಗಾಗಿ ಪರದಾಡುತ್ತಿದ್ದಾರೆ. ಕೂಡಲೇ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು.

‘ಅಧಿಕಾರಿಗಳು ಹವಾನಿಯಂತ್ರಿತ ಕಚೇರಿಗಳಲ್ಲಿ ಕುಳಿತು ಎಸಿ ವಾಹನಗಳಲ್ಲಿ ಓಡಾಡುತ್ತ ಕಾಲಹರಣ ಮಾಡುತ್ತಿದ್ದಾರೆ. ಮೇಲಧಿಕಾರಿಗಳಿಗೆ ತೋರಿಸಲು ಕಾಟಾಚಾರಕ್ಕೆ ಕೆಲಸ ಮಾಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ನಗರದ ಹೊರವಲಯದ ಬಡಾವಣೆಗಳಿಗೂ ಭೇಟಿ ಕೊಟ್ಟು ಅಲ್ಲಿಯ ಜನರ ಸಮಸ್ಯೆ ಆಲಿಸಬೇಕು. ಪ್ರಮುಖವಾಗಿ ನೀರಿನ ಸಮಸ್ಯೆಗೆ ಕಿವಿಗೊಡಬೇಕು. ತಕ್ಷಣಕ್ಕೆ ಟ್ಯಾಂಕರ್ ನೀರು ಸೇರಿದಂತೆ ಅಗತ್ಯ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.

ಬಳಿಕ ಈ ಸಂಬಂಧ ಪಾಲಿಕೆ ಆಯುಕ್ತ ಅವಿನಾಶ ಶಿಂದೆ ಅವರಿಗೆ ಹಾಗೂ ಪಾಲಿಕೆಯ ಮೂಲಕ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ ಠಾರೋಡ, ಜಿಲ್ಲಾ ಸಹಕಾರ್ಯದರ್ಶಿ ಪ್ರಭುದೇವ ಯಳಸಂಗಿ, ಜಿಲ್ಲಾ ಮಂಡಳಿ ಖಜಾಂಚಿ ಭೀಮಾಶಂಖರ ಮಾಡಿಯಾಳ, ಜಿಲ್ಲಾ ಸಹಕಾರ್ಯದರ್ಶಿ ಪದ್ಮಾವತಿ ಪಾಟೀಲ, ಮುಖಂಡರಾದ ಸಾಜೀದ್ ಅಹ್ಮದ್, ಶಿವಲಿಂಗಮ್ಮ ಲೆಂಗಟೀಕರ, ವಿದ್ಯಾಶ್ರೀ, ಮೀನಾಕ್ಷಿ, ಸುಜಾತಾ, ಕೋಕಿಲಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-34-1456720583

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.