ಕಲಬುರಗಿ: ‘ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಟ ಒಂದು ಗಂಭೀರ ಅಪರಾಧವಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ‘ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆಗಟ್ಟುವಿಕೆ’ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗದ ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವ ಅಧಿಕಾರಿ ಹಾಗೂ ಸಿಬ್ಬಂದಿ ತರಬೇತಿ ಪಡೆದು ನೊಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು’ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರು ಗ್ಲೋಬಲ್ ಇಂಡಿಯಾ ನಿರ್ದೇಶಕ ಬೃಂದಾ ಅಡಿಗೆ ಮಾತನಾಡಿ, ತರಬೇತುದಾರರಿಗೆ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಯಾವ ರೀತಿ ಮಾಡಲಾಗುತ್ತದೆ ಹಾಗೂ ಕೆಲಸದ ಸ್ಥಳಗಳಲ್ಲಿ ಯಾವ ರೀತಿ ಲೈಂಗಿಕ ಕಿರುಕುಳ ನಡೆಯುತ್ತದೆ ಎಂಬುವುದರ ಕುರಿತು ವಿವರವಾಗಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಿವಶರಣಪ್ಪ ಮಾತನಾಡಿ, ತರಬೇತಿ ಪಡೆದ ತರಬೇತುದಾರರು ಇಂತಹ ಪ್ರಕರಣಗಳು ಕಂಡುಬಂದಲ್ಲಿ ದೂರು ನೀಡಲು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-1281896099

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.