ಕಲಬುರಗಿ: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಪರವಾಗಿ ಕಪಟ ನಾಟಕ ಮಾಡುತ್ತಿದೆ’ ಎಂದು ಆರೋಪಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ನಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ನೆತ್ತಿ ಸುಡುವ ಬಿಸಿಲಿನಲ್ಲೇ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಜಮಾಯಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾಬೆನ್ ಚಿತ್ರ ಹಿಡಿದು ಪ್ರತಿಭಟಿಸಿದರು. ಬಿಜೆಪಿ–ಜೆಡಿಎಸ್ ನಾಯಕರ ಚಿತ್ರಗಳಿಗೆ ಮಸಿ ಬಳಿದರು. ‘ಮಹಿಳಾ ವಿರೋಧಿ’ಗಳ ಪ್ರತಿಕೃತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

‘2023ರಲ್ಲೇ ಮಹಿಳೆಯರಿಗೆ ಶೇ 33ರಷ್ಟು ಪ್ರಾತಿನಿಧ್ಯ ನೀಡುವ ಕಾಯ್ದೆ ಜಾರಿಯಾಗಿತ್ತು. ಇದೀಗ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 850ಕ್ಕೆ ಏರಿಸುವ ಹಾಗೂ 2029ರ ಚುನಾವಣೆಯಿಂದ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿ ಮಸೂದೆ ಜಾರಿಗೆ ಬಿಜೆಪಿ ಏಕೆ ಪ್ರಯತ್ನಿಸಿತು? ಪಂಚರಾಜ್ಯ ಚುನಾವಣೆಗಳ ಸಂದರ್ಭದಲ್ಲಿ ಇದಕ್ಕಾಗಿ ವಿಶೇಷ ಅಧಿವೇಶನ ಕರೆದ ಉದ್ದೇಶವೇನು? 2023ರಲ್ಲೇ ಮಹಿಳಾ ಮೀಸಲಾತಿ ಕಾಯ್ದೆ ರಚನೆಯಾದರೂ ಅದನ್ನು 2026ರ ಏಪ್ರಿಲ್ 16ರ ತನಕ ಅಧಿಸೂಚನೆ ಯಾಕೆ ಹೊರಡಿಸಲಿಲ್ಲ?’ ಎಂಬೆಲ್ಲ 13 ಪ್ರಶ್ನೆಗಳನ್ನು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಕೇಳಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ರೇಣುಕಾ ಸಿಂಗೆ ಮಾತನಾಡಿ, ‘ಮಹಿಳಾ ಮೀಸಲಾತಿಯ ಹೆಸರಲ್ಲಿ ಬಿಜೆಪಿ ಕುತಂತ್ರ ರಾಜಕಾರಣ ಮಾಡುತ್ತಿದೆ. ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಕಾಯ್ದೆಯು 2023ರಲ್ಲೇ ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದಿಂದ ಪಾಸಾಗಿದೆ. ಅದನ್ನು ಅಧಿಸೂಚನೆ ಹೊರಡಿಸುವ ಹೊತ್ತಿನಲ್ಲಿ ಅದಕ್ಕೆ ಕ್ಷೇತ್ರಗಳ ಪುನರ್ ವಿಂಗಡನೆಯನ್ನೂ ಸೇರಿಸಿ ಮತ್ತೆ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಜಾರಿಗೆ ಯತ್ನಿಸಿದೆ. ಇದನ್ನು ವಿರೋಧ ಪಕ್ಷಗಳು ಯಶಸ್ವಿಯಾಗಿ ತಡೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ಹುನ್ನಾರ ಬಯಲಿಗೆಳೆದಿವೆ’ ಎಂದರು.

‘ಆದರೆ, ಬಿಜೆಪಿಯು ವಿರೋಧ ಪಕ್ಷಗಳನ್ನು ಮಹಿಳಾ ವಿರೋಧಿಗಳು ಎಂದು ಬಿಂಬಿಸುವಲ್ಲಿ ತೊಡಗಿದೆ. ಕಾಂಗ್ರೆಸ್ ಎಂದಿಗೂ ಮಹಿಳಾ ವಿರೋಧಿ ಧೋರಣೆ ತೋರಿಲ್ಲ. ಉನ್ನಾವೋ ಪ್ರಕರಣಕ್ಕೆ ಉತ್ತರಿಸದವರು, ಕ್ರೀಡಾಪಟುಗಳು ಮಾಡಿದ ಲೈಂಗಿಕ ಶೋಷಣೆ ಆರೋಪಕ್ಕೆ ಕಿವುಡಾದವರು, ಮಣಿಪುರದಲ್ಲಿನ ಮಹಿಳೆಯರ ಮೇಲಿನ ಹಿಂಸಾಚಾರ ಕಂಡೂ ಕಣ್ಮುಚ್ಚಿ ಕುಳಿತವರು, ಕರ್ನಲ್ ಸೋಫಿಯಾ ಖುರೇಷಿಯನ್ನು ಭಯೋತ್ಪಾದಕರ ಸಹೋದರಿ ಎಂದೆಲ್ಲ ಟೀಕಿಸಿದವರು ಇದೀಗ ರಾಜಕೀಯ ಲಾಭಕ್ಕಾಗಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ ದಕ್ಷಿಣ ಮತಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಾಣಿಶ್ರೀ ಸಗರಕರ, ‘ದೇಶಕ್ಕೆ ಮೊದಲ ಮಹಿಳಾ ಪ್ರಧಾನಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಎಂದಿಗೂ ಮಹಿಳಾ ವಿರೋಧಿಯಲ್ಲ. ಆದರೆ, ಅವಿವೇಕಿಗಳು ಕಾಂಗ್ರೆಸ್ ಪಕ್ಷವನ್ನು ಮಹಿಳಾ ವಿರೋಧಿಗಳು ಎಂದು ಟೀಕಿಸುತ್ತಿವೆ. ಬಿಜೆಪಿಯವರು ರಾಜ್ಯದ ಜನರ ದಾರಿತಪ್ಪಿಸುತ್ತಿದ್ದಾರೆ. ಇವರೆಲ್ಲ ಇನ್ಸ್ಟಂಟ್ ಕಾಫಿ ಇದ್ದಂತೆ. ಅವರಿಗೆ ಇತಿಹಾಸವೇ ಗೊತ್ತಿಲ್ಲ’ ಎಂದು ಹರಿಹಾಯ್ದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸಾಯಿರಾ ಬಾನು, ಅಹ್ಮದಿಬೇಗಂ, ಸಂಗೀತಾ ಪಾಟೀಲ, ಗೀತಾ ಮುದಗಲ್, ಸಮರಿನ್ ಶೇಖ್, ಮಂಜುಳಾ ಕಾಶೀನಾಥ, ಜಯಶ್ರೀ ಚಿಂತಮಪಳ್ಳಿ, ಶ್ವೇತಾ ಗಾಜರೆ, ಶೋಭಾ ಕಾಳೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-34-648638163

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.