ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಯೂನಿಯನ್ ಬ್ಯಾಂಕ್‌ನಲ್ಲಿ ಮಹಿಳಾ ದಿನ

Last Updated 19 ಮಾರ್ಚ್ 2023, 6:56 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ ಕಚೇರಿಯಲ್ಲಿ ಶನಿವಾರ ಮಹಿಳಾ ದಿನವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಶ್ಲೋಕಾ ಎ. ಬಿರ್ಲಾ ಶಾಲೆಯ ಪ್ರಾಂಶುಪಾಲರಾದ ಸುನೀತಾ ಕುಲಕರ್ಣಿ ಮಾತನಾಡಿ, ‘ಮಹಿಳಾ ದಿನಾಚರಣೆಯನ್ನು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮಹಿಳೆಯ ಯಶಸ್ಸಿನ ಮೂಲವನ್ನು ಗುರುತಿಸುವಂತಾಗಬೇಕು. ಆದಾಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ’ ಎಂದರು.

ಅತಿಥಿಯಾಗಿದ್ದ ಡಾ. ಸುಷ್ಮಾ ಮಾತನಾಡಿ, ‘ಈ ಆಧುನಿಕ ಯುಗದಲ್ಲಿ ಹೆಣ್ಣು ಕೇವಲ ನಾಲ್ಕು ಗೋಡೆಗಳಿಗೆ ಸೀಮಿತವಾಗದೇ, ಹೊರಗಿನ ಪ್ರಪಂಚದಲ್ಲಿ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿರುವ ಸಂದರ್ಭದಲ್ಲಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದರು.

ಅಧ್ಯಕ್ಷತೆಯನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ ಮುಖ್ಯಸ್ಥ ಅರವಿಂದ ಹೆಗಡೆ ಮಾತನಾಡಿ, ‘ಮಹಿಳೆಯರು ಸಾಮಾಜಿಕ, ಬೌದ್ಧಿಕ ಹಾಗೂ ಆರ್ಥಿಕವಾಗಿ ಕೊಡುಗೆಗಳನ್ನು ನೀಡುತ್ತಿದ್ದಾರೆ. ಯೂನಿಯನ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಣಿಮೇಖಲೈ ಅವರು ಯಶಸ್ವಿಯಾಗಿ ಬ್ಯಾಂಕ್ ಮುನ್ನಡೆಸುತ್ತಿದ್ದಾರೆ’ ಎಂದು ಹೇಳಿದರು.

ಕಮಲಕುಮಾರ, ಧೃವ ಮೆಹತಾ ಹಾಗೂ ಶಾಖೆಗಳ ಎಲ್ಲಾ ಮಹಿಳಾ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT