ಕಲಬುರಗಿ: ನಗರದಲ್ಲಿ ಮಂಗಳವಾರ ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ಭಾರತ ವಿದ್ಯಾರ್ಥಿ ಫೆಡರೇಷನ್, ಡಿವೈಎಫ್ಐ ಜಿಲ್ಲಾ ಸಮಿತಿಗಳು 118ನೇ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಮಹಿಳೆಯರ ಹಕ್ಕುಗಳ ರಕ್ಷಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಕ್ಕೊತ್ತಾಯದ ಪ್ರತಿಭಟನೆ ನಡೆಸಿದವು.

ಬೆಳಿಗ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಮಹಿಳೆಯರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಅಲ್ಲಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಗಣತಂತ್ರ ವ್ಯವಸ್ಥೆಯಲ್ಲಿದ್ದರೂ ಸಮಾಜದಲ್ಲಿ ಇನ್ನೂ ಲಿಂಗ ತಾರತಮ್ಯ ಜೀವಂತವಾಗಿದೆ. ಸಮಾನತೆಗಾಗಿ ಮಹಿಳೆಯರು ಹೋರಾಟ ನಡೆಸಬೇಕಾಗಿದೆ. ಜೀವನೋಪಾಯದ ಮೇಲಿನ ದಾಳಿ ಮುಂದುವರಿದಿದೆ ಎಂದು ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲಾ ರಂಗದ ಮಹಿಳೆಯರಿಗೂ ಮಾತೃತ್ವ ಮತ್ತು ಮುಟ್ಟಿನ ರಜೆ ನೀಡಬೇಕು ಎಂದು ಹಕ್ಕೊತ್ತಾಯ ಮಾಡಿದರು.

ಈ ವೇಳೆ ಸಿಐಟಿಯುನ ಶಾಂತಾ ಘಂಟಿ ಮಾತನಾಡಿ, ‘ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಶೌಚಾಲಯಗಳಿರಬೇಕು. ಮಕ್ಕಳಿಗೆ ಹಾಲುಣಿಸಲು ವ್ಯವಸ್ಥೆ ಇರಬೇಕು’ ಎಂದು ಆಗ್ರಹಿಸಿದರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಪದ್ಮಿನಿ ಕಿರಣಗಿ ಮಾತನಾಡಿ, ‘ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆ ನಿರಂತರವಾಗಿ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಅಫಜಲಪುರದ ಬಳೂರಗಿ ಗ್ರಾಮದ ಬಳಿ ಗಂಡನೇ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದು, ಹೆಣ್ಣುಮಕ್ಕಳಿಗೆ ಎಲ್ಲಿಯೂ ರಕ್ಷಣೆ ಇಲ್ಲದಂತಾಗಿದೆ’ ಎಂದರು.

ಭಾರತ ಪ್ರಜಾಸತ್ತಾತ್ಮಕ ಯುವಜನ ಒಕ್ಕೂಟ (ಡಿವೈಎಫ್ಐ) ರಾಜ್ಯ ಘಟಕದ ಅಧ್ಯಕ್ಷೆ ಲವಿತ್ರ ವಸ್ತ್ರದ ಮಾತನಾಡಿ, ‘ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ, ಡಾ.ಬಿ.ಆರ್. ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಹೋರಾಟ ಮತ್ತು ಸಂವಿಧಾನದ ಫಲವಾಗಿ ಹಕ್ಕುಗಳು ಸಿಕ್ಕಿವೆ. ಆದರೆ, ಇಂದು ನಮ್ಮ ಈ ಹಕ್ಕುಗಳನ್ನು ಉಳಿಸಿಕೊಳ್ಳಲು ಕೂಡ ಹೋರಾಟ ಮಾಡಬೇಕಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ, ಜಿಲ್ಲಾ ಕೃಷಿ ಕೂಲಿಕಾರರ ಸಂಘಟನೆಯ ಮಲ್ಲಮ್ಮ ಕೊಡ್ಲಿ, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಸುಜಾತಾ ವೈ., ಬಸಮ್ಮ ಗುತ್ತೇದಾರ ಮಾತನಾಡಿದರು.

ಮುಖ್ಯಮಂತ್ರಿಗೆ ಬರೆದ 16 ಬೇಡಿಕೆಗಳ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಲಾಯಿತು.

ಸಿಐಟಿಯು ಮುಖಂಡ ಎಂ.ಬಿ.ಸಜ್ಜನ್, ಜನವಾದಿ ಮಹಿಳಾ ಸಂಘಟನೆಯ ಶಾಂತಾ ಸರಡಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-34-1494184354

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.