ಕಲಬುರಗಿ: ನಿರೀಕ್ಷೆಯಂತೆ ಇಲ್ಲಿನ ಕಲಬುರಗಿ–ಯಾದಗಿರಿ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ.

ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಪೇಠ ಅಮ್ಮಾಪುರದ ವಿಠಲ ಯಾದವ ಹಾಗೂ ಉಪಾಧ್ಯಕ್ಷರಾಗಿ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಕಾನಾಗಡ್ಡಾದ ಶಂಕರ ಚಂದ್ರಶೇಖರ ಭೂಪಾಲ್ ಆಯ್ಕೆಯಾಗಿದ್ದಾರೆ.

ಉಭಯ ಸ್ಥಾನಗಳಿಗೂ ತಲಾ ಒಂದೊಂದೇ ನಾಮಪತ್ರಗಳು ಸಲ್ಲಿಕೆಯಾಗಿಗಿದ್ದವು. ಇದರಿಂದ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಕಲಬುರಗಿ -ಯಾದಗಿರಿ ಡಿಸಿಸಿ ಬ್ಯಾಂಕ್ ಚುನಾವಣಾ ಅಧಿಕಾರಿಯಾಗಿರುವ ಕೆಕೆಆರ್ಡಿಬಿ ಅಧೀನ ಕಾರ್ಯದರ್ಶಿ ಪ್ರಕಾಶ ಕುದರಿ ಪ್ರಕಟಿಸಿದರು.

ವಿಠಲ್ ಯಾದವ ಯಾದಗಿರಿ ಜಿಲ್ಲೆಯ ಸುರಪುರ ಪಿಕೆಪಿಎಸ್ ಕ್ಷೇತ್ರದಿಂದ ಗೆದ್ದು ಡಿಸಿಸಿ ಬ್ಯಾಂಕ್ ಪ್ರವೇಶಿಸಿದ್ದರು.. ಶಂಕರ್ ಭೂಪಾಲ್ ಅವರು ಸೇಡಂ ಪಿಕೆಪಿಎಸ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ನವೆಂಬರ್ 9ರಂದು ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಒಟ್ಟು 13 ನಿರ್ದೇಶಕ ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಮತದಾನ ನಡೆದಿತ್ತು. ಅದರಲ್ಲಿ ಆರು ಕಾಂಗ್ರೆಸ್ ಬೆಂಬಲಿತರು ಗೆಲುವಿನ ನಗೆ ಬೀರಿದ್ದರು. ಇನ್ನುಳಿದ ಎರಡು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಹಾಗೂ ಒಂದು ಸ್ಥಾನದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದರು.ಚುನಾವಣೆಗೂ ಮುನ್ನವೇ ನಾಲ್ಕು ಕ್ಷೇತ್ರಗಳಿಂದ ಕಾಂಗ್ರೆಸ್ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರಿಂದ ಕಾಂಗ್ರೆಸ್ ಬೆಂಬಲಿತರ ಸಂಖ್ಯೆ 10ಕ್ಕೆ ಏರಿಕೆಯಾಗಿತ್ತು.

ಕಾಂಗ್ರೆಸ್ ಬೆಂಬಲಿತರಿಗೆ ಸರಳ ಬಹುಮತ ಸಿಕ್ಕಿದ್ದರಿಂದ ‘ಅಧ್ಯಕ್ಷ’ ಗಾದಿ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಗರಿಗೆದರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.