ಯಡ್ರಾಮಿ: ‘ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪ್ರತಿಯೊಬ್ಬ ಅಧಿಕಾರಿಯೂ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಹಲಕರ್ಟಿ ಸೂಚಿಸಿದರು.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಸಮಾಜದಲ್ಲಿರುವ ಪ್ರತಿ ವ್ಯಕ್ತಿಗೂ ಪಂಚ ಗ್ಯಾರಂಟಿ ಯೋಜನೆ ತಲುಪಿಸುವುದಕ್ಕಾಗಿ ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಮಾಡಿದೆ. ಆದರೆ ತಾಲ್ಲೂಕಿನ ಕೆಲ ಅಧಿಕಾರಿಗಳು ಪ್ರಗತಿ ಪರಿಶೀಲನೆ ಸಭೆಯಲ್ಲಿ ಸದಸ್ಯರು ಸೂಚಿಸಿದ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ನಿರ್ಲಕ್ಷ್ಯ ವಹಿಸುತ್ತಿದ್ದು, ಅಂತಹವರ ವಿರುದ್ಧ ನೋಟಿಸ್ ಜಾರಿಗೊಳಿಸಿ ಕ್ರಮಕ್ಕೆ ಮುಂದಾಗಿ’ ಎಂದರು.

‘ತಾಲ್ಲೂಕಿನಲ್ಲಿ ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆ ಬಗ್ಗೆ ಹೆಚ್ಚು ದೂರುಗಳಿದ್ದು, ಕ್ರಮ ಕೈಗೊಳ್ಳುವಂತೆ ಕಳೆದ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೆ, ಅಧಿಕಾರಿಗಳು ಈವರೆಗೂ ಕ್ರಮ ಕೈಗೊಂಡಿಲ್ಲ. ಜತೆಗೆ ಸಭೆಗೆ ಸರಿಯಾದ ಮಾಹಿತಿಯೂ ನೀಡುತ್ತಿಲ್ಲ. ಹೀಗಾಗಿ ಎರಡೂ ಇಲಾಖೆ ಅಧಿಕಾರಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಿ‘ ಎಂದರು.

ತಾ.ಪಂ ಇಒ ವೀರಣ್ಣ ಕೌಲಗಿ ಮಾತನಾಡಿ, ‘ತಾಲ್ಲೂಕಿನಲ್ಲಿ ಯಾವ ಯಾವ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲ ಅಂತಹ ಗ್ರಾಮಗಳನ್ನು ಗುರುತಿಸಿ ಬಸ್ ಕಲ್ಪಿಸಬೇಕು ಹಾಗೂ ಮುಂದಿನ ಸಭೆಗೆ ಡಿಪೊ ಮ್ಯಾನೇಜರ್ ಹಾಜರಿರಬೇಕು ಎಂದು ಡಿಪೋ ಸಿಬ್ಬಂದಿಗೆ ತಿಳಿಸಲಾಯಿತು.

ಕಳೆದ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳಿಗೆ ಅನುಪಾಲನಾ ವರದಿ ಮಂಡನೆ, ಗೃಹಲಕ್ಷ್ಮ, ಶಕ್ತಿ, ಯುವನಿಧಿ, ಅನ್ನಭಾಗ್ಯ, ಗೃಹ ಜ್ಯೋತಿ ಯೋಜನೆಯ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲಾಯಿತು.

ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಮಹಾಂತೇಶ ದೊರಿ, ಕಾವೇರಿ ಪಾಟೀಲ್, ಸಿದ್ದು ಹಿರೇಗೌಡ್ರ, ಮಹಿಬೂಬ್ ಮನಿಯಾರ್, ಭೀಮಣ್ಣ ಮಾಳಪ್ಪ, ವಿಠಲ್ ಹರೀಶಚಂದ್ರ, ಮಲ್ಕಪ್ಪ ಶಿವಪ್ಪ, ನಾನಾಗೌಡ ಮಾಲಿಪಾಟೀಲ್, ಮಂಜುನಾಥರೆಡ್ಡಿ, ಹಸನ್ ಪಟೇಲ್, ಇಸ್ಮಾಯಿಲ್ಸಾಬ್, ಹಸನ್ ಪಟೇಲ್, ತಾ.ಪಂ ವಿಷಯ ನಿರ್ವಾಹಕ ವೀರೇಶ ಕುಂಬಾರ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-31-1429940305

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.