ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ವರದಿಯಾಗಿರುವುದಿಲ್ಲ. ಸಾರ್ವಜನಿಕರು ಭಯಪಡುವ ಅವಶ್ಯಕತೆಯಿಲ್ಲ. ಈ ಕುರಿತು ಆರೋಗ್ಯ ಇಲಾಖೆಯಿಂದ ನೀಡಲಾದ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಜನವರಿಯಿಂದ ಮೇ 26ರವರೆಗೆ ಒಟ್ಟು 135 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 80 ಪ್ರಕರಣಗಳು ಸಕ್ರಿಯವಾಗಿರುತ್ತವೆ. ಒಂದು ಮರಣದ ಪ್ರಕರಣ ವರದಿಯಾಗಿರುತ್ತದೆ. ಈಗಾಗಲೇ ಜಿಮ್ಸ್ ಆಸ್ಪತ್ರೆಯಲ್ಲಿ ಒಟ್ಟು 20 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ 10 ಸಾಮಾನ್ಯ ಹಾಸಿಗೆಗಳು, 5 ಎಚ್ಡಿಯು ಮತ್ತು 5 ಐಸಿಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಖಚಿತ ಪ್ರಕರಣಗಳಲ್ಲಿ ಅಲ್ಪಪ್ರಮಾಣದ ಲಕ್ಷಣಗಳುಳ್ಳ ರೋಗಿಗಳಿಗೆ ಹೋಮ್ ಐಸೋಲೇಷನ್ ಮಾಡಲಾಗುವುದು ಹಾಗೂ ತೀವ್ರತರದ ರೋಗ ಲಕ್ಷಣ ಇರುವ ರೋಗಿಗಳಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಶೀತ, ನೆಗಡಿ, ಜ್ವರ ಇರುವ ತಮ್ಮ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಸಾರ್ವಜನಿಕರು ಆಗಾಗ ಸಾಬೂನಿನಿಂದ ಅಥವಾ ಸ್ಯಾನಿಟೈಸರ್ನಿಂದ ಕೈ ತೊಳೆಯಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಉಪಯೋಗಿಸಬೇಕು. ಯಾವುದೇ ತರಹದ ಕೆಮ್ಮು, ನೆಗಡಿ, ಗಂಟಲು ನೋವು, ಜ್ವರ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರಲ್ಲಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮಾರ್ಗಸೂಚಿಯಂತೆ ತೀವ್ರ ಉಸಿರಾಟದ ತೊಂದರೆ ಇರುವವರಿಗೆ ಹಾಗೂ ಗರ್ಭಿಣಿಯರು, ಮಕ್ಕಳು, ವೃದ್ಧರಲ್ಲಿ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರ ಸಲಹೆ ಮೇರೆಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಕೋವಿಡ್ ಸೋಂಕನ್ನು ದೃಢಪಡಿಸಿಕೊಳ್ಳಲು ಆರ್ಟಿ–ಪಿಸಿಆರ್ ಪರೀಕ್ಷೆಗೆ ಜಿಮ್ಸ್ನ ಪ್ರಯೋಗಾಶಾಲೆ(ವಿಆರ್ಡಿಎಲ್) ನಿಗದಿಪಡಿಸಿದ್ದು, ಆದ್ದರಿಂದ ಜಿಲ್ಲೆಯ ಎಲ್ಲಾ ಮಾದರಿಗಳು ಅಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.