ಸೋಮವಾರ, ಜನವರಿ 24, 2022
21 °C

ಕಲಬುರ್ಗಿ: ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಫಜಲಪುರ (ಕಲಬುರಗಿ)‌: ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದು, ಗುರುವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಚನಬಸಯ್ಯ ಸಾತಯ್ಯ ಝಳಕಿ ಬಂಧಿತ ಆರೋಪಿ. ಈತ ತಮ್ಮ ಪಕ್ಕದ ಮನೆಯ ಬಾಲಕಿಗೆ ಮಿರ್ಚಿಭಜ್ಜಿ ಕೊಡಿಸುವುದಾಗಿ ನಂಬಿಸಿ ಹೊಲಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಪಾಲಕರು ರೇವೂರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

‘ಸೋಮವಾರ (ನ.29) ಮಧ್ಯಾಹ್ನ 2ರ ಸುಮಾರಿಗೆ ಘಟನೆ ನಡೆದಿದೆ. ನಾಲ್ಕು ದಿನಗಳಿಂದ ಬಾಲಕಿ ಗುಪ್ತಾಂಗ ಸಮಸ್ಯೆಯಿಂದ ನರಳುತ್ತಿದ್ದಾಗ ಪಾಲಕರು ವಿಚಾರಿಸಿದ್ದಾರೆ. ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ಅತ್ಯಾಚಾರ ಎಸಗಿದ್ದು ಗೊತ್ತಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು