ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆಯನ್ನು ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಕಲಬುರಗಿ ಬಂದ್ ಅಂಗವಾಗಿ ನಗರದ ನಗರೇಶ್ವರ ಶಾಲೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅಮಿತ್ ಶಾ ಅವರ ಅಣಕು ಶವಯಾತ್ರೆ ನಡೆಸಲಾಯಿತು.

ಬೆಳಿಗ್ಗೆಯಿಂದಲೇ ನೀಲಿ ಬಾವುಟಗಳು ಹಿಡಿದು ರಸ್ತೆಗೆ ಇಳಿದ ಪ್ರತಿಭಟನಾಕಾರರು ಅಮಿತ್ ಶಾ ಮತ್ತು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.

ನಗರದ ಪ್ರಮುಖ ವೃತ್ತಗಳು, ರಿಂಗ್ ರೊಡ್ ಸರ್ಕಲ್ಗಳಲ್ಲಿ ಶಾ ಅವರ ಭಾವಚಿತ್ರ ಹಾಗೂ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿದರು.

ಮಧ್ಯಹ್ನ 12ರ ಸುಮಾರಿಗೆ ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಮುಂಭಾಗದಲ್ಲಿ ಜಮಾಯಿಸಿದರು. ಅಲ್ಲಿಂದ ಅಮಿತ್ ಶಾ ಅವರ ಪ್ರತಿಕೃತಿಯ ಅಣಕು ಶವ ಯಾತ್ರೆ ನಡೆಸಿದರು. ಶಾ ಭಾವಚಿತ್ರ ಹಾಗೂ ಪ್ರತಿಕೃತಿಗೆ ಚಪ್ಪಲಿ ಏಟು ಸಹ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.