ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಅಫಾತದಲ್ಲಿ ವ್ಯಕ್ತಿ ಸಾವು: ಅಪರಾಧಿಗೆ ಜೈಲು ಶಿಕ್ಷೆ

Published 21 ಫೆಬ್ರುವರಿ 2024, 15:28 IST
Last Updated 21 ಫೆಬ್ರುವರಿ 2024, 15:28 IST
ಅಕ್ಷರ ಗಾತ್ರ

ಕಲಬುರಗಿ: ವೇಗವಾಗಿ ಬೈಕ್‌ ಚಲಾಯಿಸಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾದ ಉಮಾಪತಿ ಮಲ್ಲಿಕಾರ್ಜುನ ಗಣಾಪೂರ ಎನ್ನುವವರಿಗೆ 6 ತಿಂಗಳು ಸಾದಾ ಶಿಕ್ಷೆ ಮತ್ತು ₹1 ಸಾವಿರ ದಂಡ, ಐಪಿಸಿ 304(ಎ) ಅಡಿಯಲ್ಲಿನ ಅಪರಾಧಕ್ಕೆ ₹10 ಸಾವಿರ ದಂಡ ಮತ್ತು 2 ವರ್ಷ ಸಾದಾ ಶಿಕ್ಷೆ ವಿಧಿಸಿ ಸಿಜೆಎಂ ನ್ಯಾಯಾಲಯ ಆದೇಶ ನೀಡಿದೆ.

ಅಪರಾಧಿ ಉಮಾಪತಿ ಗಣಾಪೂರ 2021ರ ಮೇ 5ರಂದು ನಿರ್ಲಕ್ಷ್ಯ ಹಾಗೂ ವೇಗವಾಗಿ ಬೈಕ್‌ ಚಲಾಯಿಸಿ ಹಡಗಿಲ ಹಾರುತಿ ಬಳಿ ನಾಗೇಂದ್ರಪ್ಪ ಎನ್ನುವವರಿಗೆ ಗುದ್ದಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ನಾಗೇಂದ್ರಪ್ಪ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಸಂಚಾರ ಪೊಲೀಸ್ ಠಾಣೆ–1ರಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ವಿನಾಯಕ ಎಸ್‌.ಕೋಡ್ಲಾ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT