ಮಂಗಳವಾರ, ಸೆಪ್ಟೆಂಬರ್ 29, 2020
22 °C

ತುಂಬಿದ ವೀರ್ ಅಣೆಕಟ್ಟೆ: ನಾಳೆಯಿಂದ 15 ಸಾವಿರ ಕ್ಯುಸೆಕ್ ಹೊರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಮಹಾರಾಷ್ಟ್ರದ ವೀರ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಹರಿಸುತ್ತಿದ್ದು, ಇದೇ 14ರಂದು ನೀರು ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ತಲುಪಲಿದೆ ಎಂದು ‌ಭೀಮಾ ಏತ ನೀರಾವರಿ ಯೋಜನೆಯ ಅಫಜಲಪುರ ವಿಭಾಗದ ಕಾರ್ಯನಿರ್ವಾಹಕ ‌ಎಂಜಿನಿಯರ್ ಅಶೋಕ ಕಲಾಲ ತಿಳಿಸಿದ್ದಾರೆ.

ಇದರಿಂದಾಗಿ ಬ್ಯಾರೇಜಿನಿಂದ 12 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತದೆ. ನದಿ ಪಾತ್ರದಲ್ಲಿ ಬರುವ ಅಫಜಲಪುರ, ಜೇವರ್ಗಿ, ಚಿತ್ತಾಪುರ ತಾಲ್ಲೂಕಿನ ಗ್ರಾಮಸ್ಥರು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು